nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    • ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಡಿಮೆಗೆ ದೂಡಿ ಮಕ್ಕಳ ಬಾಲ್ಯವನ್ನು ಕಸಿಯುವುದು ಅಪರಾಧ:  ನ್ಯಾಯಾಧೀಶ ಬಿ.ಜಯಂತ್ ಕುಮಾರ್
    ತುಮಕೂರು June 14, 2025

    ದುಡಿಮೆಗೆ ದೂಡಿ ಮಕ್ಕಳ ಬಾಲ್ಯವನ್ನು ಕಸಿಯುವುದು ಅಪರಾಧ:  ನ್ಯಾಯಾಧೀಶ ಬಿ.ಜಯಂತ್ ಕುಮಾರ್

    By adminJune 14, 2025No Comments3 Mins Read
    balakarmika

    ತುಮಕೂರು: ಸ್ವಚ್ಛಂದವಾಗಿ ಆಟ–ಪಾಠ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿ ಅವರ ಬಾಲ್ಯವನ್ನು ಕಸಿಯುವುದು ಕಾನೂನು ಅಪರಾಧವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ನಲಿವು, ಶಿಕ್ಷಣ, ವಿಶ್ರಾಂತಿ, ನೆಮ್ಮದಿಯನ್ನು ಕಸಿದುಕೊಳ್ಳುವ ಅನಿಷ್ಠ ಪದ್ಧತಿಯಾಗಿದೆ. ಅಂಕಿ–ಅಂಶದ ಪ್ರಕಾರ ವಿಶ್ವದಲ್ಲಿ 160 ಮಿಲಿಯನ್ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಲ ಕಾರ್ಮಿಕ ಪದ್ಧತಿ ಕಾಯ್ದೆಯನ್ವಯ 14 ವರ್ಷದೊಳಗಿನ ಬಾಲ ಮಕ್ಕಳು ಹಾಗೂ 18 ವರ್ಷದೊಳಗಿನ ಕಿಶೋರ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನು ಅಪರಾಧ. ಮಕ್ಕಳು ಅವರ ಬಾಲ್ಯವನ್ನು ಸ್ವಚ್ಛಂದವಾಗಿ ಕಳೆಯಲು ಪೋಷಕರು ಹಾಗೂ ಸಮಾಜ ಅವಕಾಶ ಮಾಡಿಕೊಡಬೇಕೆಂದು ತಿಳಿಸಿದರು.

    ಬಾಲ ಕಾರ್ಮಿಕ ಪದ್ಧತಿಯನ್ನು ಸಮಾಜದಿಂದ ಮುಕ್ತಗೊಳಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು. ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿರುವ ಮಕ್ಕಳು ತಮ್ಮ ಹಕ್ಕುಗಳಿಗಾಗಿ ನ್ಯಾಯಕ್ಕಾಗಿ ಹೋರಾಟ ಮಾಡಲು ಸಾಧ್ಯವಿಲ್ಲವಾದ್ದರಿಂದ ಜೂನ್ 12ರಂದು ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ಪದ್ಧತಿ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

    ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡುತ್ತಾ, ನಾವು ವಾಸಿಸುವ ಸುತ್ತಮುತ್ತಲಿನ ಪ್ರದೇಶ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರು ಹಾಗೂ ಅವರ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುವ ಕೆಲಸವನ್ನು ನಾವು ಮಾಡಬೇಕು ಎಂದು ತಿಳಿಸಿದರು.

    ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪೋಷಕರ ಮಾರ್ಗದರ್ಶನದಲ್ಲಿ ನಡೆಯಬೇಕು. ಶಿಕ್ಷಣದೊಂದಿಗೆ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಂಡು ಪೋಷಕರು ತಲೆತಗ್ಗಿಸುವಂತಹ ಕೆಲಸ ಮಾಡಬಾರದು. ಯಾವುದೇ ವಿದ್ಯಾರ್ಥಿ ತನ್ನ ತಂದೆ-ತಾಯಿಗೆ ತಿಳಿಯದೆ ಸಾಮಾಜಿಕ ಜಾಲತಾಣದ ಖಾತೆಗಳನ್ನು ಹೊಂದಿದ್ದಲ್ಲಿ ಈ ದಿನವೇ ಖಾತೆಯಿಂದ ನಿರ್ಗಮಿಸಬೇಕು. ಫೇಸ್‌ಬುಕ್, ಇನ್ಸ್ ಸ್ಟಾಗ್ರಾಮ್‌ನಂತಹ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಶೇ.90ರಷ್ಟು ಪೋಕ್ಸೋ ಪ್ರಕರಣಗಳು ವರದಿಯಾಗುತ್ತಿವೆ. ಮಕ್ಕಳು ಇಂತಹ ಅಪಾಯಗಳಿಂದ ದೂರವಿರಬೇಕು ಎಂದು ಕಿವಿ ಮಾತು ಹೇಳಿದರು.

    ಸಾಮಾಜಿಕ ಜಾಲತಾಣಗಳಿಗೆ ಮಾರು ಹೋಗುವುದರಿಂದ ಮಾನಸಿಕ ಖಿನ್ನತೆ, ಆತ್ಮಹತ್ಯೆಗೆ ಯತ್ನ, ಶಿಕ್ಷಣದಲ್ಲಿ ಮೊಟಕುಗೊಳ್ಳುವ ಹಾಗೂ ಸೈಬರ್ ಅಪರಾಧಗಳಿಂದ ಮುಗ್ಧ ಮಕ್ಕಳು ಅಪಾಯಕ್ಕೆ ಗುರಿಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ವಯಸ್ಕರಾಗುವವರೆಗೂ ಮೊಬೈಲ್ ಬಳಸದೆ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳು ಶ್ರಮದ ಕೆಲಸ ಮಾಡಲು ಶಕ್ತರಿರುವುದಿಲ್ಲ. ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ದೂಡದೆ ಶಾಲೆಗೆ ಕಳುಹಿಸುವ ಮೂಲಕ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳುವ ವಾತಾವರಣವನ್ನು ನಿರ್ಮಿಸಬೇಕು. ವಿದ್ಯಾರ್ಥಿಗಳೂ ಸಹ ಆರ್ಥಿಕವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವವರೆಗೂ ಪ್ರೀತಿ-ಪ್ರೇಮಕ್ಕೆ ಬಲಿಯಾಗದೆ ಪೋಷಕರ ಕನಸನ್ನು ನನಸು ಮಾಡಬೇಕು. “ದುಡಿಮೆ ಬೇಡ-ಶಿಕ್ಷಣ ಬೇಕು” ಎಂಬ ಮಂತ್ರದ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಿ ಮಕ್ಕಳ ಹಕ್ಕಿಗಾಗಿ ನಾವೆಲ್ಲಾ ಹೋರಾಡಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕಾಧಿಕಾರಿ ತೇಜಾವತಿ ಕೆ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಮಧುಗಿರಿ ಉಪ ವಿಭಾಗದ ಕಾರ್ಮಿಕಾಧಿಕಾರಿ ಫೈರೋಜ್ ಪಾಷಾ, ಗ್ರಂಥಾಲಯ ಇಲಾಖೆಯ ಉಪನಿರ್ದೇಶಕ ದಿವಾಕರ್, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕ ಪರಮೇಶ್, ಶಾಲಾ–ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.

    ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೇಂದ್ರ ಗ್ರಂಥಾಲಯ ಸಭಾಂಗಣದವರೆಗೂ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ವಿರೋಧಿ ದಿನ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು…

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.