ಪುಣೆ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಸಾವನ್ನಪ್ಪಿದ್ಧಾರೆ. ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಸೇರಿದಂತೆ ಪೊಲೀಸರು ಮತ್ತು ವಿಪತ್ತು ಪರಿಹಾರ ಕಾರ್ಯಕರ್ತರು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ.
ಇಲ್ಲಿಯವರೆಗೆ ಎಂಟು ಜನರನ್ನು ರಕ್ಷಿಸಲಾಗಿದ್ದು, ಇಬ್ಬರು ಮಹಿಳೆಯರು ಇನ್ನೂ ಸೇತುವೆಯ ಕೆಳಗೆ ಸಿಲುಕಿಕೊಂಡಿದ್ದಾರೆ.
ಪುಣೆ ಮತ್ತು ಪಿಂಪ್ರಿ ಚಿಂಚ್ ವಾಡ್ ಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದರೂ, ಪುಣೆ ಗ್ರಾಮೀಣ ಪ್ರದೇಶದ ಮಾವಲ್ ಪ್ರದೇಶದಲ್ಲಿ ಸೇತುವೆ ಕುಸಿತ ಸಂಭವಿಸಿದೆ, ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW