ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಗುರುತು ಪತ್ತೆ ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಒಬ್ಬ ಮಾತ್ರವೇ ಬದುಕುಳಿದಿದ್ದಾರೆ. ಅಹಮದಾಬಾದ್ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಈ ಅವಘಡದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಮಾತ್ರವಲ್ಲದೇ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ.
ಇಲ್ಲಿಯವರೆಗೆ 272 ಡಿಎನ್ ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ — ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಇತರ 18 ವ್ಯಕ್ತಿಗಳು ಯಾರು (272 – [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.
ಡಿಎನ್ ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್ ಎ ಪರೀಕ್ಷೆಯ ಮೂಲಕ 80 ಸಂತ್ರಸ್ತರನ್ನು ಗುರುತಿಸಲಾಗಿದೆ. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW