ಕೊರಟಗೆರೆ: ನಗರದ ಮುಖ್ಯರಸ್ತೆಯಲ್ಲಿ ಆಟೋ ವ್ಹೀಲಿಂಗ್ ಮಾಡುತ್ತಾ ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದ ಆಟೋ ಚಾಲಕನನ್ನು ಕೊರಟಗೆರೆ ಪೊಲೀಸರು ಬಂಧಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತೋಷ್ ಬಂಧಿತ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಶನಿವಾರ ರಾತ್ರಿ ಮುಖ್ಯರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಿದ್ದ ದೃಶ್ಯವನ್ನು ಚಿತ್ರೀಕರಿಸಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪಿಎಸ್ ಐ ವೈ.ಜಿ.ತೀರ್ಥೇಶ್ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯ ಸಹಿತ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.
ವ್ಹೀಲಿಂಗ್ ಮಾಡುವುದು, ಕರ್ಕಶ ಧ್ವನಿ ಮಾಡಿಕೊಂಡು ಓಡಾಡುವುದು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವುದು ಕಂಡುಬಂದಲ್ಲಿ ಕ್ರಮವಹಿಸುವುದರೊಂದಿಗೆ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW