ಬೆಂಗಳೂರು: ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ ಕೇಳಿಬಂದಿದೆ.
ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎಂಬವರು ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಕೇಬಲ್ ಚಾನೆಲ್ ಸೆಟ್ಅಪ್ ಮಾಡಿಕೊಡುವುದಾಗಿ ಹೇಳಿ ವಂಚನೆ ಮಾಡಿದ್ದಾರೆಂದು ಅವರು ದೂರಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಗೋಲ್ಡ್ ಸುರೇಶ್, ಇದು ಊಹಾಪೋಹದ ಆರೋಪ. ಅಧಿಕೃತವಾಗಿ ನನ್ನ ಮೇಲೆ ಎಲ್ಲೂ ಎಫ್ ಐಆರ್ ಆಗಿಲ್ಲ. 2018ರಲ್ಲಿ ನನ್ನ ಸ್ನೇಹಿತನ ಮೂಲಕ ಆ ವ್ಯಕ್ತಿ ಪರಿಚಯ ಆಗಿದ್ರು. ಅವರ ಕೆಲಸ ಮಾಡಿಕೊಟ್ಟಿದ್ದೀನಿ. ನಾನು ಯಾರಿಗೂ ಯಾವುದೇ ಹಣ ಕೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW