ಬೆಂಗಳೂರು: ರಾಜ್ಯಾಧ್ಯಕ್ಷ ಹುದ್ದೆ ಕುರಿತು ಪಕ್ಷ ಸದ್ಯವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಅಂತಿಮವಾಗಿ ಯಾರನ್ನು ಮಾಡಿದರೆ ಒಳ್ಳೆಯದು ಎಂಬ ಕುರಿತು ಅಂತಿಮ ನಿರ್ಧಾರ ಸದ್ಯವೇ ಆಗುವ ವಿಶ್ವಾಸವಿದೆ ಎಂದರು.
ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ ಎಂಬ ಅನಿಸಿಕೆ ನನ್ನದು. ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿಯನ್ನು ಕೊಡುತ್ತ ಬಂದಿದ್ದೇನೆ ಎಂದು ಹೇಳಿದರು.
ನಾನು ಮತ್ತು ಪಕ್ಷದ ಕೆಲವು ಹಿರಿಯ ಮುಖಂಡರು ನಿನ್ನೆ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ಮಾರ್ಗದರ್ಶಕರಾದ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20–25 ನಿಮಿಷಗಳ ಕಾಲ ಸುದೀರ್ಘವಾಗಿ ರಾಜ್ಯ ರಾಜಕಾರಣ, ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇವೆ ಎಂದು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW