ವಾಷಿಂಗ್ಟನ್: ಇಸ್ರೇಲ್- -ಇರಾನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿ ನೀಡಿದೆ. ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದೆ.
ಇರಾನ್ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ.
ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಘೋಷಣೆ ಮಾಡಿದ್ದಾರೆ. ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಟ್ರಂಪ್ ಹೇಳಿದ್ದಾರೆ.
ಇರಾನ್ ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW