ಶಿಮ್ಲಾ: ಸರ್ಕಾರಿ ಶಾಲೆಯೊಂದರಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ.
ಶಾಲೆಯಲ್ಲಿ ನಡೆಸಲಾದ ಶಿಕ್ಷಾ ಸಂವಾದ ಕಾರ್ಯಕ್ರಮದಲ್ಲಿ ಲೈಂಗಿಕ ಕಿರುಕುಳ ನಡೆದಿರುವ ವಿಚಾರವನ್ನು ವಿದ್ಯಾರ್ಥಿನಿಯರು ಬಹಿರಂಗಪಡಿಸಿದ್ದಾರೆ. 8, 9, 10ನೇ ತರಗತಿಯ ವಿದ್ಯಾರ್ಥಿನಿಯರು ಗಣಿತ ಶಿಕ್ಷಕ ಅನುಚಿತವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಉಲ್ಲೇಖ ಮಾಡಿದ್ದರು.
ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಗಳು ಗಣಿತ ಶಿಕ್ಷಕನ ವಿರುದ್ಧ ಲಿಖಿತ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಸದ್ಯ ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW