ದಾವಣಗೆರೆ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಮನೆ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ನೆರೆಹೊರೆಯ 15 ಮತ್ತು 17 ವರ್ಷದ ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಮಗಳು ಕಾಣಿಸದ ಹಿನ್ನೆಲೆ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬಯಲಿಗೆ ಬಂದಿದೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ನೊಂದ ಬಾಲಕಿ 7 ವರ್ಷ ವಯಸ್ಸಿನವಳಾಗಿದ್ದು, ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW