ಚಿಕ್ಕೋಡಿ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ರೇಣುಕಾ ಸಂಜಯ್ ಬಂಡಗಾರ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಆಟವಾಡುತ್ತಿದ್ದ ವೇಳೆ ಏಕಾಏಕಿ ಈಕೆಗೆ ಹೃದಯಾಘಾತವಾಗಿದೆ. ತಕ್ಷಣ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಆಸ್ಪತ್ರೆಗೆ ರವಾನಿಸಲು ಯತ್ನಿಸಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW