nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ:  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
    ತುಮಕೂರು June 26, 2025

    ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ:  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

    By adminJune 26, 2025No Comments2 Mins Read
    tumakuru vv

    ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ.  ಸಮಾಜದ ಬಗ್ಗೆ ಸ್ಪಷ್ಟ ನೋಟ–ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

    ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ‌ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ –2025”  ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ.  ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದರು.

    ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು ಮಾತನ್ನು ನೆನಪಿಸಿಕೊಳ್ಳುತ್ತಾರೆ. “ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತದೆ. ಬೆಳೆಯುತ್ತಾ ಅಲ್ಪ ಮಾನವನನ್ನಾಗಿ ಮಾಡಲಾಗುತ್ತದೆ”.  ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು.  ಹೀಗಾದಾಗ ಮಾತ್ರ ಸಾಮಾಜಿಕ‌ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.

    ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ. ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ.  ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, Clickbait, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ.  ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ.  ಮೊದಲು ಸತ್ಯ, ನಂತರ ವೇಗ ಎಂಬ ನುಡಿಯು ಈಗ ಇನ್ನೂ ಹೆಚ್ಚು ಪ್ರಸ್ತುತವಾಗಿದೆ. Chat GPT ಇರಬಹುದು ಅಥವಾ AI  ಯುಗದಲ್ಲಿ ನಿಮ್ಮತನವನ್ನು ಕಳೆದುಕೊಳ್ಳದೆ ಕಾರ್ಯನಿರ್ವಹಿಸಿದರೆ, ಕೃತಕತೆ ಇಲ್ಲದ ಯಶಸ್ಸು ಸಾಧ್ಯ  ಎಂದವರು ಅಭಿಪ್ರಾಯಪಟ್ಟರು.

    ತುಮಕೂರು ವಿವಿ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ., ಪ್ರಜಾ ಪ್ರಗತಿ ಸಂಪಾದಕರಾದ ನಾಗಣ್ಣ, ಸಿಂಡಿಕೇಟ್ ಸದಸ್ಯರಾದ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಿಣಿ ಅವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು…

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.