nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.
    ಕೊರಟಗೆರೆ June 27, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    By adminJune 27, 2025No Comments2 Mins Read
    koratagere

    ಕೊರಟಗೆರೆ : ಭಾರತ ವಿಶ್ವದಲ್ಲಿಯೇ ಯುವ ಬಲಿಷ್ಠ ಮತ್ತು ಸದೃಢ ರಾಷ್ಟ್ರವಾಗಿದೆ. ಈ ಬಲಿಷ್ಠ ರಾಷ್ಟ್ರವನ್ನು ಮಣಿಸಲು ಅನ್ಯ ದೇಶಗಳು ಡ್ರಗ್ಸ್ ಮೂಲಕ ದೇಶಕ್ಕೆ ಕಾಲಿಟ್ಟಿವೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

    ತುಮಕೂರು ಜಿಲ್ಲಾ ಪೋಲಿಸ್, ಮಧುಗಿರಿ ಉಪ ವಿಭಾಗ, ಕೊರಟಗೆರೆ ಪೋಲಿಸ್ ಠಾಣೆ ವತಿಯಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದಲ್ಲಿ ವಿದ್ಯಾರ್ಥಿಗಳ ಜೊತೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣದವರೆಗೆ ‘‘ವಿಶ್ವ ಮಾದಕ ದ್ರವ್ಯಗಳ ವಿರೋಧಿ’’ ದಿನದ ಬಗ್ಗೆ ಹಮ್ಮಿಕೊಳ್ಳಲಾದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಶೇ.೫೮ ರಿಂದ ೬೦%ರಷ್ಟು ಮಂದಿ ಯುವಕರಿರುವ ಬಲಿಷ್ಠ ದೇಶ ಭಾರತ. ಕಳೆದ ಎರಡು ದಶಕದಲ್ಲಿ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕತೆ ಗುಣಮಟ್ಟವನ್ನು ಕುಗ್ಗಿಸಲು ಅನ್ಯ ದೇಶಗಳಿಂದ ಮಾದಕ ವಸ್ತುಗಳು ಹೆಚ್ಚಾಗಿ ರಫ್ತು ಆಗುತ್ತಿವೆ. ೧೯೮೭ ಡಿ.೭ರಂದು ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯಲ್ಲಿ ಜೂ.೨೬ರಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಎಂದು ಘೋಷಿಸಿದೆ ಎಂದು ಹೇಳಿದರು.

    ಉತ್ತಮ ಸಮಾಜಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ. ಆದರೆ ಡ್ರಗ್ಸ್ ಚಟದಿಂದಾಗಿ ಯುವಶಕ್ತಿಯು ತಪ್ಪು ದಾರಿ ಹಿಡಿಯುತ್ತಿದೆ. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಅತ್ಯಂತ  ಜಾಗೃತರಾಗಿರಬೇಕು. ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಬೇಕು ಎಂದು ಹೇಳಿದರು.

    ಸಿಪಿಐ ಅನಿಲ್ ಮಾತನಾಡಿ, ವಿಶ್ವದಾದ್ಯಂತ ಮಾದಕ ವಸ್ತುಗಳ ದುಶ್ಚಟಗಳಿಗೆ ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾರ್ವಜನಿಕರ ಸಹಕಾರ ಅಷ್ಟೇ ಪ್ರಮುಖವಾಗಿದೆ ಎಂದು ಹೇಳಿದರು.

    ಸ್ಕೌಟ್ಸ್ ಅಂಡ್ ಗೈಡ್ಸ್ ತಾ.ಅಧ್ಯಕ್ಷ ಕೆ.ಆರ್ ಓಬಳರಾಜು ಮಾತನಾಡಿ, ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವ್ಯಸನಿಗಳಾಗಬಾರದು. ಸರ್ಕಾರವು ಮಾದಕ ದ್ರವ್ಯ ಮತ್ತು ಅಕ್ರಮ ಸಾಗಣೆಯನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

    ವಿದ್ಯಾರ್ಥಿಗಳಿಂದ ಪ್ರತಿಜ್ಞೆ:

    ಪಟ್ಟಣದ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ಹಲವು ಶಾಲೆಯ ವಿದ್ಯಾರ್ಥಿಗಳು ವೃತ್ತಾಕಾರದಲ್ಲಿ ನಿಂತು ಮಾದಕ ಪದಾರ್ಥಗಳ ವಿರುದ್ಧ ನಿರಂತರ ಧ್ವನಿ ಮೊಳಗಿಸುವೆ, ನಾನು ಮಾದಕ ಪದಾರ್ಥ ಸೇವಿಸುವುದಿಲ್ಲ, ಇತರರು ಸೇವಿಸದಂತೆ ತಡೆಯಲು ಪ್ರಯತ್ನಿಸುತ್ತೇವೆ. ಮಾದಕ ಪದಾರ್ಥಗಳನ್ನು ಸದಾ ವಿರೋಧಿಸುವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

    ಈ ವೇಳೆ ಪಿ ಎಸ್‌ ಐ ತೀರ್ಥೇಶ್, ಅಭಿಷೇಕ್, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಮುಖ್ಯಸ್ಥ ಕರಿಸಿದ್ದಪ್ಪ, ಕಾರ್ಯದರ್ಶಿ ಪ್ರಸನ್ನಕುಮಾರ್, ಶಿಕ್ಷಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.