ಬೆಂಗಳೂರು: ಸೆಪ್ಟಂಬರ್ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ ಎನ್ನುವ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ವಿಧಾನಸೌಧಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹವಿಲ್ಲ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂಬ ಪ್ರಶ್ನೆಗೆ, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು. ಪಕ್ಷದಲ್ಲಿ ಆಂತರಿಕ ಕಲಹವಿಲ್ಲ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW