ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಚಾಮರಾಜನಗರ ಸಿಸಿಎಫ್ ಹೀರಾಲಾಲ್ ಅವರು, ಮೃತ ತಾಯಿ ಹುಲಿಗೆ 8 ವರ್ಷಗಳಾಗಿದ್ದು, ಮರಿಗಳು ಸುಮಾರು 10 ತಿಂಗಳು ವಯೋಮಾನದವಾಗಿವೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಐವರು ದನಗಾಹಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಲಿಗಳ ಕಳೇಬರ ಪತ್ತೆಯಾದ ಅಣತಿ ದೂರದಲ್ಲೇ ಹಸುವಿನ ಮೃತದೇಹ ಸಿಕ್ಕಿದ್ದು, ಕ್ರಿಮಿನಾಶಕ ಸಿಂಪಡಣೆ ಮಾಡಿರುವುದು ತಿಳಿದುಬಂದಿದೆ. ವಿಷ ಹಾಕಿದ್ದ ಹಸುವನ್ನು ತಿಂದು ಹುಲಿಗಳು ಅಸುನೀಗಿರುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW