ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಕಂಪು ಪಸರಿಸಿರುವ ಬಾನು ಮಷ್ತಾಕ್ ಅವರಿಗೆ ಇದೀಗ ಮತ್ತೊಂದು ಗೌರವ ದೊರೆತಂತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW