ತುಮಕೂರು : ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ ಮನೆಯೊಳಗೇ ನುಗ್ಗಿದ್ದ ಪರಿಣಾಮ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಬಿ.ಎಚ್.ರಸ್ತೆಯ ಪಕ್ಕದಲ್ಲಿ ಜಮೀನಿನಲ್ಲಿ ಪುಟ್ಟಣ್ಣ ಎಂಬುವವರ ಮನೆಗೆ ಬಸ್ಸು ನುಗ್ಗಿದೆ. ಆಗುಂಬೆ ಯಿಂದ ಕೋಲಾರ ಹೋಗುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ 10ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW