nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!
    ಕೊರಟಗೆರೆ July 2, 2025

    ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!

    By adminJuly 2, 2025No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಸಾರ್ವಜನಿಕ ಮತ್ತು ಪ.ಜಾತಿ, ಪ.ಪಂಗಡ ಸ್ಮಶಾನಕ್ಕೆ ಸರ್ಕಾರ ಭೂಮಿ ಮಂಜೂರು ಮಾಡಿದ್ದರೂ, ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸ್ಮಶಾನ ಅಭಿವೃದ್ಧಿಯಾಗದೆ ಅಂತ್ಯ ಸಂಸ್ಕಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.


    Provided by
    Provided by

    ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಸರ್ವೇ.ನಂ.43ರಲ್ಲಿ ಪ.ಜಾತಿ ಮತ್ತು ಪ.ಪಂಗಡ ಸ್ಮಶಾನಕ್ಕೆ 10 ಗುಂಟೆ, ಸಾರ್ವಜನಿಕ ಸ್ಮಶಾನಕ್ಕೆ 10 ಗುಂಟೆ ಜಮೀನು 2018ರಲ್ಲಿ ಮಂಜೂರು ಮಾಡಿದೆ. 2023–24ರಲ್ಲಿ ಗ್ರಾ.ಪಂಚಾಯ್ತಿಗೆ ಕಂದಾಯ ಇಲಾಖೆಯಿಂದ ಹಸ್ತಾಂತರವಾಗಿದೆ. ಆದರೂ ಈವರೆಗೂ ಗ್ರಾ.ಪಂ. ಅಧಿಕಾರಿಗಳು ಸಾರ್ವಜನಿಕ ಸ್ಮಶಾನವನ್ನು ಅಭಿವೃದ್ಧಿ ಮೀನಾಮೇಷ ಎಣಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲು ಗ್ರಾ.ಪಂ. ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    koratagere

    ಮೃತ ದೇಹವಿಟ್ಟು ಪ್ರತಿಭಟನೆ:

    ಬೈಚಾಪುರ ಗ್ರಾಮದಲ್ಲಿ ಕಳೆದ 2018ರಲ್ಲಿ ದಲಿತ ಕುಟುಂಬ ಒಂದರಲ್ಲಿ ಸಾವಿನ ಘಟನೆ ನಡೆದಾಗ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಮೃತದೇಹವನ್ನು ಗ್ರಾ.ಪಂ. ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಸುದ್ದಿ ತಿಳಿದ ತಹಶೀಲ್ದಾರ್ ಸ್ಥಳಕ್ಕೆ ಧಾವಿಸಿ ಜಿಲ್ಲಾಧಿಕಾರಿಗಳ ಸೂಚನೆಯಂತೆ  ತನ್ನ ಕುಟುಂಬದ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಮಶಾನ ಕೊರತೆಯಿಂದ ಕಂದಾಯ ಇಲಾಖೆ ಅರಣ್ಯ ಇಲಾಖೆ ನರ್ಸರಿ ಪ್ರದೇಶದಲ್ಲಿನ 20 ಗುಂಟೆ ಜಮೀನು ಸ್ಮಶಾನಕ್ಕೆಂದು ಮೀಸಲಿಟ್ಟು ಮಂಜೂರು ಮಾಡಿದ್ದರು, ಆದರೆ ೭ ವರ್ಷ ಕಳೆದರೂ ಸ್ಮಶಾನ ಇದುವರೆಗೂ ಅಭಿವೃದ್ಧಿಯಾಗಿಲ್ಲ.

    ಅಧಿಕಾರಿಗಳ ಉಡಾಫೆ ಉತ್ತರ:

    2011ರ ಜನಗಣತಿ ಆಧಾರದ ಮೇಲೆ, ಭೂ ಕಂದಾಯ ಕಾಯ್ದೆ 1964 ರ ಕಲಂ 71ರ ಅಡಿಯಲ್ಲಿ ಜಿಲ್ಲಾಡಳಿತ ಬೈಚಾಪುರ ಗ್ರಾಮದ ಸರ್ಕಾರಿ ತೋಪು ಸರ್ವೇ.ನಂ.43ರಲ್ಲಿ ಜಮೀನನ್ನು ಎಸ್ಸಿ/ಎಸ್ಟಿ ಸ್ಮಶಾನ 10 ಗುಂಟೆ, ಸಾರ್ವಜನಿಕ ಸ್ಮಶಾನ 10 ಗುಂಟೆ ಜಮೀನು ಮಂಜೂರು ಮಾಡಿದೆ. ಆದರೆ ಗ್ರಾ.ಪಂ ಅಧಿಕಾರಿಗಳು ಸದರಿ ಜಾಗವನ್ನು ಹಸ್ತಾಂತರ ಮಾಡಿಕೊಂಡು ಸಾರ್ವಜನಿಕರ ಬಳಕೆಗೆ ನೀಡಲು ನಿರ್ಲಕ್ಷ್ಯವಹಿಸಿದ್ದು, ಈ ಬಗ್ಗೆ ಗ್ರಾ.ಪಂ ಅಧಿಕಾರಿಗಳನ್ನು ಪ್ರಶ್ನಿಸಿದಾಗ ನಮಗೆ ಹಸ್ತಾಂತರವಾಗಿಲ್ಲ ಎಂಬ ಉಡಾಫೆ ಉತ್ತರ ನೀಡುತ್ತಿದ್ದು ಇವರ ಕಾರ್ಯವೈಖರಿಗೆ ತಿಳಿದ ಕೈಗನ್ನಡಿಯಾಗಿದೆ.

    ಗ್ರಾಮದ ಸ್ಮಶಾನದ ಬಗ್ಗೆ ತಹಶೀಲ್ದಾರ್ ಮಂಜುನಾಥ್ ಅವರನ್ನು ಸಂಪರ್ಕಿಸಿದಾಗ ಸ್ಥಳ ಪರಿಶೀಲಿಸಿ ಮಾಹಿತಿ ನೀಡುತ್ತೇನೆ ಎಂದು ಹೇಳುತ್ತಿದ್ದು, ಇದು ಕಂದಾಯ ಇಲಾಖೆಯ ನಿರ್ಲಕ್ಷ್ಯವೋ ಗ್ರಾ.ಪಂ ಆಡಳಿತ ವೈಫಲ್ಯವೋ ಎಂಬ ಅನುಮಾನ ಸಾರ್ವನಿಕರಲ್ಲಿ ಕಾಡುತ್ತಿದ್ದು, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ಅಲ್ಲದೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಕೂಡಲೇ ನಿರ್ಲಕ್ಷö್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    2017—18 ರಲ್ಲಿ ಬೈಚಾಪುರ ಗ್ರಾಮದಲ್ಲಿ ಸ್ಮಶಾನ ಕೊರತೆಯಿಂದ ಮೃತರ ಅಂತ್ಯಕ್ರಿಯೆಗೆ ಪರದಾಡುವಂತಾಗಿತ್ತು. ಕಂದಾಯ ಇಲಾಖೆ ಸರ್ವೇ.ನಂ ೪೩ರಲ್ಲಿ ಸ್ಮಶಾನ ಮಂಜೂರು ಮಾಡಿತ್ತು ನಂತರ 2023–24ರಲ್ಲಿ ಅಭಿವೃದ್ಧಿಗೆ ಮತ್ತು ನಿರ್ವಹಣೆಗೆ ಗ್ರಾ.ಪಂ. ಹಸ್ತಾಂತರಿಸಿದೆ. 5 ಲಕ್ಷ ಮೊತ್ತದ ನರೇಗಾ ಯೋಜನೆಯಡಿ ಕ್ರಿಯಾಯೋಜನೆ ಸಿದ್ದತೆ ಮಾಡಿಕೊಂಡಿದ್ದು, ಶೀಘ್ರದಲ್ಲಿ ಕಾಂಪೌಂಡ್, ನೆರಳಿನ ವ್ಯವಸ್ಥೆ, ನೀರಿನ ತೊಟ್ಟಿಗೆ ವ್ಯವಸ್ಥೆ ಕಲ್ಪಿಸಿ ಅಭಿವೃದ್ಧಿ ಪಡಿಸಲಾಗುವುದು.

    — ವೆಂಕಟರೆಡ್ಡಿ, ಗ್ರಾ.ಪಂ. ಸದಸ್ಯ.


    ಸಾಮಾಜಿಕ ಅರಣ್ಯ ವಲಯ ಭೂಮಿಯಲ್ಲಿ ಪ.ಜಾತಿ ಮತ್ತು ಸಾರ್ವಜನಿಕರ ಸ್ಮಶಾನಕ್ಕೆಂದು 20 ಗುಂಟೆ ಭೂಮಿಯನ್ನು ಕಂದಾಯ ಇಲಾಖೆ ಮಂಜೂರು ಮಾಡಿ ಗ್ರಾ.ಪಂ. ಹಸ್ತಾಂತರಿಸಿ ಹಲವು ವರ್ಷಗಳೇ ಆಗಿದೆ. ಗ್ರಾ.ಪಂಚಾಯಿತಿಯಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಈವರೆಗೂ ನಡೆದಿಲ್ಲಾ, ಗ್ರಾ.ಪಂ ಅಧಿಕಾರಿಗಳಿಗೆ ಹಸ್ತಾಂತರವೇ ಆಗಿಲ್ಲಾ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ. ದಲಿತ ಪರ ಸಂಘಟನೆಯು ಇದನ್ನು ತೀವ್ರವಾಗಿ ಖಂಡಿಸುತ್ತದೆ.

    — ದಾಡಿ ವೆಂಕಟೇಶ್, ದಲಿತ ಮುಖಂಡ.


    2010ರಲ್ಲಿ ಸ್ಮಶಾನ ಜಾಗದಲ್ಲಿ ಅರಣ್ಯ ಇಲಾಖೆ ನರ್ಸರಿ ನಡೆಸಲು ಮುಂದಾಗಿತ್ತು. ಗ್ರಾಮಸ್ಥರ ವಿರೋಧದಿಂದ ಸ್ಮಶಾನಕ್ಕೆಂದು 20 ಗುಂಟೆ ಜಮೀನನ್ನು ಕಂದಾಯ ಇಲಾಖೆ ಮಂಜೂರು ಮಾಡಿ ಎರಡು ಮೂರು ವರ್ಷದಿಂದೆ ಗ್ರಾ.ಪಂ ಹಸ್ತಾಂತರಿಸಿದೆ. ಸ್ಮಶಾನದ ನಾಮಫಲಕ ಹಾಕಿಲ್ಲಾ, ಅಭಿವೃದ್ಧಿ ಕೆಲಸದತ್ತ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಗ್ರಾ.ಪಂ ಅಧಿಕಾರಿಗಳು.

    — ಹನುಮಂತರಾಯಪ್ಪ, ಮಾಜಿ ಗ್ರಾ.ಪಂ. ಸದಸ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ತುಮಕೂರು: ಗುಬ್ಬಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ತಾಲ್ಲೂಕು ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ…

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.