ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ–ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ರಶ್ಮಿ (28) ಮತ್ತು ಆಕೆಯ 9 ವರ್ಷದ ಪುತ್ರಿ ಎಂದು ಗುರುತಿಸಲಾಗಿದೆ.
ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶರಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ತಾಯಿ ಮತ್ತು ಮಗಳು ಇಬ್ಬರೂ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC