ಮೈಸೂರು: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದರು.
ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೋ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC