ಸರಗೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಅಂಧತ್ವ ನಿವಾರಣೆಗಾಗಿ ಇಂದಿನಿಂದ ರಾಜ್ಯಾದ್ಯಂತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಜುಲೈ 3ರಂದು ರಾಜ್ಯದಲ್ಲಿ ಒಟ್ಟು 393 ಕೇಂದ್ರಗಳಲ್ಲಿ ಏಕಕಾಲದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ತಾಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯ ಕ್ರಮದಲ್ಲಿ ಮೊದಲಿಗೆ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ದಿನ ನಿತ್ಯದ ಚಟುವಟಿಕೆಯಲ್ಲಿ ಮನೆ ಮನೆ ಭೇಟಿ ನೀಡಿ ಪ್ರಾಥಮಿಕ ತಪಾಸಣೆ ಮಾಡುತ್ತಾರೆ, ತಪಾಸಣೆಯಲ್ಲಿ ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳಿಸುವುದು, ಅಗತ್ಯ ಚಿಕಿತ್ಸೆಗೆ ನೆರವು ಮಾಡಿ ಕೊಡುವುದು ಎಂದರು.
ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಟ್ಟು 1,470 ಕನ್ನಡಕಗಳು ಬಂದಿರುತ್ತವೆ. ಇದರಲ್ಲಿ1,092 ಫಲಾನುಭವಿಗಳಿಗೆ ಕನ್ನಡಕವನ್ನು ವಿತರಣೆ ಮಾಡಿದ್ದೇವೆ. ಇನ್ನು ಉಳಿದ 378 ಕನ್ನಡಕಗಳನ್ನು ವಿತರಣೆ ಮಾಡುತ್ತೇವೆ ಎಂದರು.
ನಂತರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಾಧಿಕಾ ಶ್ರೀನಾಥ್ ಮಾತನಾಡಿ, ನಮ್ಮ ತಾಲೂಕಿನಲ್ಲಿ ಈ ರೀತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷಕರವಾದ ವಿಷಯ. ಸರಗೂರು ಪಟ್ಟಣದ ಜನರು ಮತ್ತು ಸುತ್ತಮುತ್ತಲಿನ ಗ್ರಾಮ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ ಮತ್ತು ಕನ್ನಡವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವೀರೇಶ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಭಾಗ್ಯಲಕ್ಷ್ಮಿ, ವೈದ್ಯಾಧಿಕಾರಿ ಡಾ ಸುಜಾತ, ನೇತ್ರಾಧಿಕಾರಿ ಗಿರೀಶ್, ಕಚೇರಿ ಅಧೀಕ್ಷಕ ವಿಜಯ ರಾಘವ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರಾದ ರವಿರಾಜ್, ಅರ್ಚನಾ, ರೇಖಾ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದರಾದ ಹರೀಶ್ ನಿಲವಾಗಿಲು, ಜಗದೀಶ್, ಹರೀಶ್ ಮಹೇಶ್, ಪುಷ್ಪ, ಶಾಂತಿ , ಮಹಾದೇವ, ಮಹದೇವಸ್ವಾಮಿ, ಚಂದ್ರ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC