ತಿಪಟೂರು: ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜುಲೈ 6ರಂದು ತಿಪಟೂರಿನಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ವನಿತಾ ಪ್ರಸನ್ನ ತಿಳಿಸಿದರು.
ನಾನು ತಿಪಟೂರು ರೋಟರಿಯ 66ನೇ ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಂತಸ ತಂದಿದ್ದು, ರೋಟರಿ ನಗರಕ್ಕೆ ಸೀಮಿತವಾಗದೆ ಗ್ರಾಮೀಣ ಪ್ರದೇಶದ ಭಾಗದಲ್ಲೂ ಸರ್ಕಾರಿ ಶಾಲೆಗಳಿಗೆ ಅಗತ್ಯ ಉಪಕರಣ, ಶೌಚಾಲಯ ವ್ಯವಸ್ಥೆ, ಬಡ ಜನರ ಆರೋಗ್ಯ ಸೇವೆ, ವಿಶೇಷವಾಗಿ ಸೀಳು ತುಟಿ ಶಸ್ತ್ರ ಚಿಕಿತ್ಸೆ, ಹೀಗೆ ಹಲವಾರು ಸೇವೆಗಳನ್ನು ಸಲ್ಲಿಸಲು ಬಯಕೆ ಇದೆ ಮತ್ತು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವುದು ಎಂದು ತಿಳಿಸಿದರು.
ಬಡವರ್ಗದವರಿಗೆ ಡಯಾಲಿಸಿಸ್ ಯೂನಿಟ್ ಅನಾಥ ಮಕ್ಕಳನ್ನು ದತ್ತು ಪಡೆದು ಶಿಕ್ಷಣ ಕೊಡಿಸುವ ಉದ್ದೇಶ ನನ್ನದಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷಡಾಬಾ ಶಂಕ್ರಣ್ಣ, ಸದಸ್ಯ ವೇದ ಶಂಕರ್ ಇತರರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC