nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಪಿಎಲ್ ಮೆಗಾ ಹರಾಜಿಗೆ ಕ್ಷಣಗಣನೆ; ಸ್ಟಾರ್ ಆಟಗಾರರಿಗೆ ಶಾಕ್
    ರಾಷ್ಟ್ರೀಯ ಸುದ್ದಿ February 12, 2022

    ಐಪಿಎಲ್ ಮೆಗಾ ಹರಾಜಿಗೆ ಕ್ಷಣಗಣನೆ; ಸ್ಟಾರ್ ಆಟಗಾರರಿಗೆ ಶಾಕ್

    By adminFebruary 12, 2022No Comments2 Mins Read
    ipl

    ಐಪಿಎಲ್ ಮೆಗಾಹರಾಜಿಗೆ ಕ್ಷಣಗಣನೆ ಶುರುವಾಗಿದ್ದು ಫೆ. 12 ಮತ್ತು 13 ರಂದು ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ. ಈಗಾಗಲೇ ತಂಡಗಳ ಫ್ರಾಂಚೈಸಿಗಳು ಸಿಲಿಕಾನ್ ಸಿಟಿಗೆ ತಲುಪಿದ್ದು ತಮ್ಮ ತಂಡಕ್ಕೆ ಯಾವ ಯಾವ ಆಟಗಾರರನ್ನು ತೆಗೆದುಕೊಳ್ಳಬೇಕೆಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.ಈಗಾಗಲೇ ಐಪಿಎಲ್‍ನ ಬಿಡ್‍ ನಿಂದ ಸ್ಟಾರ್ ಆಟಗಾರರಾದ ಕ್ರಿಸ್‍ಗೇಲ್, ಮಿಚೆಲ್ ಸ್ಟ್ರಾಕ್, ಕೇಲ್ ಜೆಮ್ಮಿಸನ್, ಬೆನ್ ಸ್ಟ್ರೋಕ್ ಅವರು ಹೊರಗುಳಿದಿದ್ದರೆ, ಇನ್ನು ಬಿಡ್ ಅಖಾಡದಲ್ಲಿರುವ ಕೆಲವು ಸ್ಟಾರ್ ಆಟಗಾರರನ್ನು ಬಿಕರಿ ಮಾಡದೆ ಇರಲು ಕೂಡ ಫ್ರಾಂಚೈಸಿಗಳು ನಿರ್ಧರಿಸಿದ್ದರೆ.

    ಮೊದಲ ಸುತ್ತಿನಲ್ಲಿ ಸ್ಟಾರ್ ಆಟಗಾರರನ್ನು ಯಾವ ತಂಡಗಳ ಫ್ರಾಂಚೈಸಿಗಳು ಬಿಕರಿ ಮಾಡಿಕೊಳ್ಳದೆ ಎರಡನೇ ಸುತ್ತಿನಲ್ಲಿ ಕಡಿಮೆ ಬೆಲೆಗೆ ತಮ್ಮ ತಂಡದ ಪಾಲು ಮಾಡಿಕೊಳ್ಳುವ ಲೆಕ್ಕಾಚಾರಗಳನ್ನು ಕೂಡ ಹಾಕಿಕೊಂಡಿದ್ದಾರೆ.ಕಳೆದ ಬಾರಿಯ ಐಪಿಎಲ್ ಬಿಡ್ಡಿಂಗ್‍ನಲ್ಲೂ ಕೆರಿಬಿಯನ್‍ನ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಅವರನ್ನು ಮೂಲ ಬೆಲೆ 2 ಕೋಟಿಗೆ ಪ್ರೀತಿ ಜಿಂಟಾ ಮಾಲೀಕತ್ವದ ಕಿಂಗ್ಸ್ ಪಂಜಾಬ್ ಕೊಂಡೊಕೊಂಡ ಜಾಣ್ಮೆಯನ್ನು ಈ ಬಾರಿಯು ಫ್ರಾಂಚೈಸಿಗಳು ತೊಡಗಿದ್ದು, ಭಾರತ ಹಾಗೂ ವಿದೇಶಿ ಸ್ಟಾರ್ ಆಟಗಾರರನ್ನು ಕಡಿಮೆ ಬೆಲೆಗೆ ಬಿಕರಿ ಮಾಡಿಕೊಂಡು ತಂಡವನ್ನು ಬಲಿಷ್ಠಗೊಳಿಸಿಕೊಂಡು ಚಾಂಪಿಯನ್ ಆಗುವ ಲೆಕ್ಕಾಚಾರದಲ್ಲಿದೆ.ಈ ಬಾರಿಯ ಐಪಿಎಲ್ ಬಿಡ್ಡಿಂಗ್‍ ನಲ್ಲಿ ಲಖ್ನೋ ಹಾಗೂ ಅಹಮದಾಬಾದ್ ತಂಡಗಳು ಹೊಸದಾಗಿ ಸೇರ್ಪಡೆ ಆಗುವ ಮೂಲಕ ಒಟ್ಟು 10 ತಂಡಗಳಾಗಿದ್ದು ಈ ಬಾರಿ ನಾವು ಭಾರೀ ಮೊತ್ತಕ್ಕೆ ಮಾರಾಟ ವಾಗುತ್ತೇವೆ ಎಂದು ಅಂದಾಜಿಸಿರುವ ಸುರೇಶ್‍ರೈನಾ, ಕೆ.ಗೌತಮ್, ಕೃನಾಲ್ ಪಾಂಡ್ಯ, ದಿನೇಶ್ ಕಾರ್ತಿಕ್,ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್, ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್‍ ರಂತಹ ಆಟಗಾರರನ್ನು ಈ ಬಾರಿ ಕಡಿಮೆ ಮೊತ್ತಕ್ಕೆ ಬಿಕರಿ ಮಾಡಿಕೊಳ್ಳಲು ಫ್ರಾಂಚೈಸಿಗಳು ಲೆಕ್ಕಾಚಾರ ಹಾಕಿದ್ದಾರೆ.


    Provided by
    Provided by
    Provided by

    ಈ ಪಟ್ಟಿಯಲ್ಲಿರುವ ಆಟಗಾರರ ಪೈಕಿ ಸೂರ್ಯಕುಮಾರ್ ಯಾದವ್ ಬಿಟ್ಟರೆ ಉಳಿದ ಯಾವ ಆಟಗಾರರು ಟ್ವೆಂಟಿ- 20 ಮಾದರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿಲ್ಲದಿರುವುದು ಕೂಡ ಇವರ ವ್ಯಾಲ್ಯೂ ಕಡಿಮೆ ಆಗಲು ಕಾರಣವಾಗಿದೆ.

    ರೈನಾಗೆ ಶಾಕ್:

    ಭಾರತ ತಂಡಕ್ಕೆ ರಾಜೀನಾಮೆ ನೀಡಿದ ನಂತರ ಸುರೇಶ್‍ ರೈನಾ ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರೂ ಕೂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ, ಕಳೆದ ಬಾರಿ ಅವರು 11 ಕೋಟಿಗೆ ಸಿಎಸ್‍ ಕೆ ರೀಟೈನ್ ಆಗಿದ್ದರು, ಆದರೆ ಈ ಬಾರಿ ತಂಡದಲ್ಲಿ ಸ್ಥಾನ ಕಾಪಾಡಿಕೊಳ್ಳುವಲ್ಲಿ ಎಡವಿರುವುದರಿಂದ ಕಡಿಮೆ ಮೊತ್ತಕ್ಕೆ ಮಾರಾಟವಾಗಲಿದ್ದಾರೆ.

    ಕನ್ನಡಿಗರಿಗೆ ಕುಗ್ಗಿದ ಬೇಡಿಕೆ:

    ಇನ್ನೂ ಕನ್ನಡಿಗರಾದ ಮನೀಷ್ ಪಾಂಡೆ, ಕೃಷ್ಣಪ್ಪ ಗೌತಮ್ ಅವರು ಕೂಡ ಕಳೆದ ಬಾರಿಯ ಐಪಿಎಲ್ ಬಿಡ್ಡಿಂಗ್‍ ನಲ್ಲಿ ಕ್ರಮವಾಗಿ 11 ಕೋಟಿ (ಸನ್ ರೈಸರ್ಸ್ ಹೈದ್ರಾಬಾದ್) ಹಾಗೂ 9.5 ಕೋಟಿ( ಚೆನ್ನೈ ಸೂಪರ್ ಕಿಂಗ್ಸ್) ತಂಡದ ಪಾಲಾಗಿದ್ದರು ಆದರೆ ಈ ಬಾರಿ ಅವರನ್ನು ಕೂಡ ಕಡಿಮೆ ಮೊತ್ತಕ್ಕೆ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿಗಳು ಪ್ಲ್ಯಾನ್‍ ಮಾಡಿದ್ದಾರೆ.

    ಇನ್ನು ಕಳೆದ ಕೆಲವು ಋತುಗಳಿಂದ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್, ಕೃನಾಲ್ ಪಾಂಡ್ಯ( 8.8 ಕೋಟಿ), ಕೋಲ್ಕತ್ತಾ ನೈಟ್ ರೈಡರ್ಸ್‍ನ ಆಟಗಾರರಾದ ಆಸ್ಟ್ರೇಲಿಯಾದ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ (15.5 ಕೋಟಿ), ದಿನೇಶ್ ಕಾರ್ತಿಕ್ (7.5 ಕೋಟಿ), ಇಯಾನ್ ಮಾರ್ಗನ್ (5.25 ಕೋಟಿ) ಅವರು ಕಳೆದ ಬಾರಿಯ ಐಪಿಎಲ್ ಬೆಡ್ಡಿಂಗ್‍ನಲ್ಲಿ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿದ್ದರೂ ಕೂಡ ಈ ಬಾರಿ ಅವರನ್ನು ಕಡಿಮೆ ಬೆಲೆಗೆ ಬಿಕರಿ ಮಾಡಿಕೊಂಡು ಯುವ ಆಟಗಾರರ ಮೇಲೆ ಹೆಚ್ಚಿನ ಹಣವನ್ನು ಹೂಡುವ ಮೂಲಕ ತಂಡವನ್ನು ಬಲಿಷ್ಠಗೊಳಿಸಿಕೊಳ್ಳುವತ್ತ ಆರ್‍ಸಿಬಿ ಸೇರಿದಂತೆ ಎಲ್ಲಾ ತಂಡದ ಫ್ರಾಂಚೈಸಿಗಳು ಲೆಕ್ಕಾಚಾರ ಹಾಕಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್: ಜಿಲ್ಲೆಯ ಕಮಲನಗರ ಹಾಗೂ ತೋರಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಂತಹ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ದುರಸ್ತಿಗೆ ಮುಂದಾಗಬೇಕು ಎಂದು…

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    September 18, 2025

    ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.