nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    ಜಿಲ್ಲಾ ಸುದ್ದಿ July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    By adminJuly 6, 2025No Comments2 Mins Read
    dr g prameshwar

    ತುಮಕೂರು: ದೇಶದ ಸ್ವಾತಂತ್ರ್ಯ ಹೋರಾಟಕದಲ್ಲಿ ಶೋಷಿತ ಸಮುದಾಯಗಳು ಮುಂಚೂಣಿಯಲ್ಲಿದ್ದವು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿಕೊಂಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

    ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಹಸಿರುಕ್ರಾಂತಿಯ ಹರಿಕಾರ,‌ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ‌ ಮೂಲಕ ಗೌರವ ಸಮರ್ಪಣೆ ಸಲ್ಲಿಸಿ ಅವರು ಮಾತನಾಡಿದರು.


    Provided by
    Provided by

    ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳವರು ಮುಂಚೂಣಿಯಲ್ಲಿ ಇರಲಿಲ್ಲ. ಶೋಷಿತ ಸಮುದಾಯದ ಜನರು ಹೆಚ್ಚಾಗಿ ಮುಂಚೂಣಿಯಲ್ಲಿದ್ದರು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿದ್ದರು. ಸ್ವಾತಂತ್ರ್ಯ ನೀಡುವುದಾದರೆ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಬಾಬು ಜಗಜೀವನ್ ರಾಮ್ ಅವರು ಧೈರ್ಯವಾಗಿ ಹೇಳಿದ್ದನ್ನು ನಾವೆಲ್ಲ ಸ್ಮರಿಸಬೇಕು ಎಂದರು.

    ದೇಶದ ಮಹಾನ್ ನಾಯಕರ ಹುಟ್ಟುಹಬ್ಬ, ಪುಣ್ಯಸ್ಮರಣೆಯ ಆಚರಣೆಗಳು, ಅವರ ಆದರ್ಶಗಳನ್ನು ಸ್ಮರಿಸಿಕೊಳ್ಳಲು ಉಪಯೋಗವಾಗುತ್ತವೆ. ಅವರ ಜೀವನ ಚರಿತ್ರೆಯನ್ನು ನಾವು ಸ್ಮರಿಸಿದರೆ ಮುಂದಿನ ಪೀಳಿಗೆಗೂ ಗೊತ್ತಾಗುತ್ತದೆ. ನಾವೆಲ್ಲ ಹೋರಾಟದ ದಾರಿಯಲ್ಲಿ ಹೋಗುತ್ತಿದ್ದೇವೆ. ಇದಕ್ಕೆ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ನಮಗೆ ದಾರಿದೀಪವಾಗಬೇಕು ಎಂದು ಹೇಳಿದರು.

    ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸಲು, ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆ. ಸಮುದಾಯ ಭವನ ಮತ್ತು ಪ್ರತಿಮೆಯನ್ನು ಸ್ಥಾಪಿಸುವ ಕೆಲಸವನ್ನು ಬಹಳ ವೇಗವಾಗಿ ಮಾಡಬೇಕಿದೆ. ಐದು ಎಕರೆ ಜಾಗವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ. ಮುಖ್ಯಮಂತ್ರಿಯವರಿಗೆ 10 ಕೋಟಿ ರೂ. ಅನುದಾನವನ್ನು ಕೇಳಲಾಗಿದೆ ಎಂದರು.

    ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು. ಒಂದೊತ್ತಿನ ಊಟ ಕಡಿಮೆಯಾದರು ಪರವಾಗಿಲ್ಲ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಇದರಿಂದ ಮುಂದಿನ ಪೀಳಿಗೆಯ ಜೀವನ ಬದಲಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನಮ್ಮ‌ ಮಕ್ಕಳನ್ನು ತಯಾರು ಮಾಡಬೇಕು ಎಂದು ಹೇಳಿದರು.

    ದೇಶದಲ್ಲಿರುವ ಜಾತಿ ಸಂಘಗಳು ಹೊರ ದೇಶಗಳಲ್ಲಿ ಹುಟ್ಟಿಕೊಂಡಿವೆ. ಅಲ್ಲಿಯೂ ಜಾತಿ ಸಮ್ಮೇಳನ ನಡೆಯುತ್ತಿವೆ ಎಂದು ಬೇಸರಿಸಿದರು.

    ಒಳ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಹಿಂದಿನ ಸರ್ಕಾರ ಯಾವ ರೀತಿ ದಾರಿ ತಪ್ಪಿಸಿದರು ಎಂಬುದು ನಮಗೆ ಗೊತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಒಳ‌ಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಸ್ಪಷ್ಟಪಡಿಸಿದರು.

    ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಮಾಡಿಯೇ ತೀರುತ್ತೇವೆ. ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇ. 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ನಡೆಯಬೇಕಿದೆ. ಒಳ ಮೀಸಲಾತಿ ತೀರ್ಮಾನ ಆಗುವವರೆಗು ನೇಮಕಾತಿ ಹಾಗೂ ಮುಂಬಡ್ತಿ ನೀಡುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಹಾಗೂ ದಲಿತಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.