ಬೀದರ್: ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸ ವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನಮಂತ್ರಿ ಆವಾಸ ಯೋಜನೆ (ನಗರ) 2.0 ಯೋಜನೆ ಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ
ಮನೆ ಎಂಬುದು ಪ್ರತಿಯೊಬ್ಬನೂ ಕನಸು ಕಾಣುವ ಮೂಲಭೂತ ಅಗತ್ಯ ಪಿಎಂಎವೈ (ನಗರ) 2.0 ಯೋಜನೆಯ ಮೂಲಕ ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ಮನೆ ನೀಡುವ ಗುರಿ ಹೊಂದಲಾಗಿದ್ದು, ಬೀದರ್ ಲೋಕಸಭಾ ಕ್ಷೇತ್ರದ ಅರ್ಹರು ಈ ಯೋಜನೆಯ ಲಾಭವನ್ನು ಪಡೆಯಬೇಕು ಆಶಯವಾಗಿದೆ.
ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಈಗಾಗಲೇ ಯಾವುದೇ ರಾಜ್ಯ ಅಥವಾ ಕೇಂದ್ರ ಸರಕಾರದ ವಸತಿ ಯೋಜನೆಯಡಿ ಮನೆ ಸಹಾಯಧನ ಪಡೆದುಕೊಂಡಿರಬಾರದು. ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು ಅರ್ಜಿ ಸಲ್ಲಿಕೆಗೆ ಜು.15 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸ್ಥಳೀಯ ನಗರ ಪಂಚಾಯಿತಿ/ ಮುನ್ಸಿಪಲ್ ಕಛೇರಿಯಲ್ಲಿ ಅರ್ಜಿ ಸಲ್ಲಿ ಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC