ಗೌರಿಬಿದನೂರು: ಜೆಡಿಎಸ್ ಕಾರ್ಯಕರ್ತರೊಬ್ಬರು ನಿಖಿಲ್ ಕುಮಾರಸ್ವಾಮಿ ಅವರ ಕಾರಿನಡಿಗೆ ಸಿಲುಕಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನದಿ ದಡ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಸದಸ್ಯತ್ವ ನೋಂದಣಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನದಿ ದಡ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕಾರ್ಯಕರ್ತನೊಬ್ಬ ಕಾರಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದಾನೆ.
ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಮಾತನಾಡಲು ತೆರಳುತ್ತಿದ್ದಾಗ ಕಾರ್ಯಕರ್ತರೊಬ್ಬರು ನಿಖಿಲ್ ಕಾರಿನಡಿ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಗೌರಿಬಿದನೂರಿನ ನದಿದಡ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜನತಾದಳ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕಾಗಿ ನಿಖಿಲ್ ಕುಮಾರಸ್ವಾಮಿಯವರು ಆಗಮಿಸಿದ್ದರು. ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಪಡೆದ ಅವರು, ಮೊದಲಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನೂರಾರು ಕಾರ್ಯಕರ್ತರು ಮತ್ತು ಸ್ಥಳೀಯ ಜನರೊಂದಿಗೆ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC