ಬಳ್ಳಾರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಅಂತ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಲ್ಲಿಯಲ್ಲಿ ನಾನು ಕಂಡಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದೆಲ್ಲಾ ಮ್ಯಾಚ್ ಫಿಕ್ಸಿಂಗ್ ಆಗಿರುವ ಕಾರಣ, ಯಾವುದೇ ಕಾರಣಕ್ಕೂ ಡಿಕೆಶಿ ಅವರು ಸಿಎಂ ಆಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಎರಡೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಆದರೆ, ಅವರ ಅಗ್ರಿಮೆಂಟ್ ಪ್ರಕಾರ ಸಿಎಂ ಅಧಿಕಾರ ಎರಡೂವರೆ ವರ್ಷ ಪೂರ್ಣಗೊಂಡಿದ್ದು, ಸಿಎಂ ಆಗಲು ಡಿ.ಕೆ ಶಿವಕುಮಾರ್ ಅವರು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೊಂದಡೆ ಸಿಎಂ ಸಿದ್ದರಾಮಯ್ಯ ತಮ್ಮ ಖುರ್ಚಿಯನ್ನು ಭದ್ರಮಾಡಿಕೊಳ್ಳಲು ತಮ್ಮ ಪ್ರಯತ್ನದಲ್ಲಿ ನಿರತರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಈ ಹಿನ್ನೆಲೆ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್ ಪಕ್ಷದ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಸಿಎಂ, ಡಿಸಿಎಂ ಅವರು ಈಗಾಗಲೇ ದಿಲ್ಲಿಯಲ್ಲಿ ಕುಳಿತಿದ್ದು, ದೊಡ್ಡ ಬದಲಾವಣೆಯಾಗುವ ಸಾಧ್ಯತೆಗಳಿವೆ. ಈ ಎಲ್ಲ ಗೊಂದಲಗಳಿಗೆ ರಾಜ್ಯದ ಜನತೆಗೆ ಕಾಂಗ್ರೆಸ್ ನಾಯಕರು ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC