ಸರಗೂರು: ವಿದ್ಯಾರ್ಥಿಗಳು ಕೆಟ್ಟ ಹವ್ಯಾಸಗಳಿಂದ ದೂರವಿದ್ದು, ಶಿಸ್ತಿನ ಜೀವನ ರೂಪಿಸಿಕೊಳ್ಳಬೇಕು ಎಂದು ಸರಗೂರು ಪೊಲೀಸ್ ಠಾಣೆಯ ಎಚ್.ಸಿ. ಶೋಭಾ ಹೇಳಿದರು.
ತಾಲೂಕಿನ ಹಳೆಯೂರು ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಮ್ಮಿಕೊಂಡಿದ್ದ ನೀತಿ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲ್ಯ ವಿವಾಹ ದೊಡ್ಡ ಸಾಮಾಜಿಕ ದುಷ್ಪರಿಣಾಮವಾಗಿದ್ದು, ಆದರ ನಿಯಂತ್ರಣದ ಹೊರತು ಸ್ವಾಸ್ಥ್ಯ ಆರೋಗ್ಯ ಸಾಧ್ಯವಿಲ್ಲ, ವಿದ್ಯಾರ್ಥಿಗಳ ಪೋಷಕರು ಇದರ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಕ್ಕಳು ಶಾಲಾ ಶಿಕ್ಷಕರು ಹೇಳಿಕೊಡುವ ಶಿಕ್ಷಣವನ್ನು ಕಲಿತು ಉನ್ನತ ಮಟ್ಟದಲ್ಲಿ ವಿದ್ಯಾರ್ಜನೆಗೆ ಮುಂದಾಗಬೇಕು ಎಂದು ತಿಳಿಸಿದರು.
ಮಕ್ಕಳು ಸಹಾಯವಾಣಿ’ 1098 ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಇಂದಿನ ಶಾಲಾಮಕ್ಕಳಲ್ಲಿ ನೀತಿ ಶಿಕ್ಷಣ, ಅದರ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವುದು ಅತಿ ಅಗತ್ಯವಾಗಿದ್ದು, ಇದರಿಂದ ಶಾಲಾ ಮಕ್ಕಳ ಸಮರ್ಥ ವ್ಯಕ್ತಿತ್ವ ಬೆಳಸುವುದು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಠಾಣೆ ಸಿಬ್ಬಂದಿ ವಿನಯ್ ಕುಮಾರ್ ಮಾತನಾಡಿ, ಶಾಲಾ ಮಕ್ಕಳು ಬಾಲ್ಯದಿಂದಲೇ ಕೆಟ್ಟ ಹವ್ಯಾಸಗಳಿಂದ ದೂರವಿದ್ದು ಶಿಸ್ತಿನ ಜೀವನ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಾಲೆಗೆ ಬರುವಾಗ ಶಾಲೆಯಿಂದ ಮನೆಗೆ ತೆರಳುವಾಗ ಜಾಗೂರಕತೆಯಿಂದ ತೆರಳ ಬೇಕು ಹಾಗೆ ಸಂಚಾರಿ ನಿಯಮಗಳನ್ನು ಪಾಲಿಸುವುದು ಸೂಕ್ತ ಎಂದರು.
ಪೋಕ್ಸೊ, ಪಿಓಸಿಎಸ್ ಓ ಕಾಯಿದೆ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಈ ವೇಳೆ ಶಾಲಾ ಮುಖ್ಯ ಶಿಕ್ಷಕ ಸುಬ್ಬರಾಮ್, ಸಹ ಶಿಕ್ಷಕರಾದ ಡಿ.ರಂಗನಾಥ್, ಹೆಚ್. ವಿ.ಅನಿಲ್ ಕುಮಾರ್, ರೇವತಿ, ಸಹನಾ, ಎಸ್. ಡಿ.ಎಂ.ಸಿ.ಅಧ್ಯಕ್ಷರು ಸದಸ್ಯರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC