ಸರಗೂರು: ಸದಾ ಒತ್ತಡ ಜೀವನದಲ್ಲಿರುವ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕುಟುಂಬದವರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸುವುವಲ್ಲಿ ಅಸಹಾಯಕರಾಗಿತ್ತಾರೆ ಎಂದು ಸರಗೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ, ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಹಾಗೂ ಅವರ ಕುಟುಂಬದವರಿಗೆ ನಾರಾಯಣ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಾಯದೊಂದಿಗೆ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜನರ ರಕ್ಷಣೆಯಲ್ಲಿ ತೊಡಗಿಸಿಕೊಂಡು ಆರೋಗ್ಯದ ಕಾಳಜಿ ಬಗ್ಗೆ ಹೆಚ್ಚಿನ ಒತ್ತು ನೀಡುವುದಿಲ್ಲ. ಹಾಗಾಗಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳ ಆದೇಶದ ಮೇರೆಗೆ ನಮ್ಮ ಠಾಣೆಯ ಸಿಬ್ಬಂದಿಗಳು ಹಾಗೂ ಕುಟುಂಬದವರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ತಿಳಿಸಿದರು.
ರಸ್ತೆಯಲ್ಲಿ ನಿಂತು ಕರ್ತವ್ಯ, ಒತ್ತಡದ ಮಧ್ಯೆ ಕೆಲಸ, ಸಮಯ ಮೀರಿ ಆಹಾರ ಸೇವನೆ ಮುಂತಾದ ಕಾರಣಗಳಿಂದ ಪೊಲೀಸ್ ಸಿಬ್ಬಂದಿ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದು ಕಷ್ಟಕರವಾಗುತ್ತದೆ. ಇಂಥ ಸಿಬ್ಬಂದಿಗೆ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಆದರೆ ಚಿಕಿತ್ಸೆ ಪಡೆಯುವುದಕ್ಕೆ ಸಾಧ್ಯವಾಗುತ್ತದೆ. ಇದರಿಂದ ಕೆಲಸದಲ್ಲಿ ಉತ್ತಮ ಸಾಧನೆಗೂ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ ಎಂದರು.
ಆರೋಗ್ಯದ ತಪಾಸಣೆ ಮಾಡಿಸಿಕೊಂಡರೆ ದೇಹದಲ್ಲಿನ ಸಮಸ್ಯೆ ಬಗ್ಗೆ ತಿಳಿದು ಅದಕ್ಕೆ ತಕ್ಕ ಔಷಧಿ ಪಡದೆಕೊಂಡರೆ ಸಮಸ್ಯೆ ಬಗೆಹರಿಸ ಕೊಳ್ಳಬಹುದು. ಆದ್ದರಿಂದ ಪೊಲೀಸ್ ಇಲಾಖೆಯವರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ರೈಂ ಬ್ರಾಂಚ್ ಇನ್’ಸ್ಪೆಕ್ಟರ್ ಗೋಪಾಲ್, ಎ ಎಸ್ ಐ ಕೃಷ್ಣಕುಮಾರ್, ನಾರಾಯಣ್, ಚಂದ್ರ, ಪುರುಷೋತ್ತಮ್, ಶೋಭಾ, ಮಹಾದೇವಮ್ಮ, ಗಣಪತಿ, ದೇವರಾಜು, ಆನಂದ, ಇಮ್ರಾನ್, ವಿನಯ್ ಕುಮಾರ್, ಶಿವರಾಜು, ಕೃಷ್ಣಯ್ಯ, ಜಗದೀಶ್, ಸುನೀಲ್, ಇನ್ನೂ ಸಿಬ್ಬಂದಿಗಳು ಸೇರಿದಂತೆ ಕುಟುಂಬದ ಸದಸ್ಯರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC