nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    ಕೊರಟಗೆರೆ July 12, 2025

    ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ

    By adminJuly 12, 2025No Comments2 Mins Read
    jetti agrahara

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಗೆ ಸದಸ್ಯರ ಒಪ್ಪಿಗೆಯಂತೆ ಸಿ.ಡಿ.ಪ್ರಭಾಕರ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

    ಅಧ್ಯಕ್ಷೆ ಪುಷ್ಪ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ತಾ.ಪಂ. ಇ ಓ ಅಪೂರ್ವ ಕಾರ್ಯನಿರ್ವಹಿಸಿದ್ದು ಸರ್ವ ಸದಸ್ಯರ ಒಪ್ಪಿಗೆಯಂತೆ ಸಿ.ಡಿ.ಪ್ರಭಾಕರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದ್ದು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಶುಭಕೋರಿದರು.


    Provided by
    Provided by

    ನೂತನ ಅಧ್ಯಕ್ಷ ಸಿ.ಡಿ ಪ್ರಭಾಕರ್ ಮಾತನಾಡಿ, ಗೃಹ ಸಚಿವರ ಆಶೀರ್ವಾದದಿಂದ ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಸಿಗುವಂತೆ ಮಾಡುವುದರ ಜೊತೆಗೆ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿ ಮಾದರಿ ಗ್ರಾ.ಪಂಯನ್ನಾಗಿ ಮಾಡುವುದೇ ನನ್ನ ಪ್ರಮುಖ ಗುರಿ. ಆಯ್ಕೆ ಮಾಡಿದ ಸದಸ್ಯರಿಗೂ ಹಾಗೂ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಪಕ್ಷಾತೀತವಾಗಿ ಗ್ರಾ.ಪಂ. ಸದಸ್ಯರು ಸಿ.ಡಿ ಪ್ರಭಾಕರ್ ಅವರನ್ನು ಆಯ್ಕೆ ಮಾಡಿದ್ದಾರೆ. ಗೃಹ ಸಚಿವರ ಮಾರ್ಗದರ್ಶನದೊಂದಿಗೆ ನೂತನ ಅಧ್ಯಕ್ಷರು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಪಕ್ಷಾತೀತವಾಗಿ ಅಭಿವೃದ್ದಿಗೆ ಕೈ ಜೋಡಿಸಿದಾಗ ರಾಜ್ಯದಲ್ಲಿಯೇ ಕೊರಟಗೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಕಾಣಬಹುದು ಎಂದು ಹೇಳಿದರು.

    ಗ್ರಾ.ಪಂ. ಸದಸ್ಯ ಕೋಕಿಲ ಸಂದೀಪ್ ಮಾತನಾಡಿ, ಅಧ್ಯಕ್ಷ ಚುನಾವಣೆಯಿಂದ ಗ್ರಾ.ಪಂಚಾಯ್ತಿನಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಮರು ಅಧ್ಯಕ್ಷರ ಚುನಾವಣೆಯಲ್ಲಿ ಸಿ.ಡಿ ಪ್ರಭಾಕರ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಪ್ರತಿ ಗ್ರಾ.ಪಂ.ನಲ್ಲಿ ಅಧ್ಯಕ್ಷರ ಚುನಾವಣೆಗಳು ಸದಸ್ಯರ ಒಮ್ಮತದಿಂದಲೇ ನಡೆದಾಗ ಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲು ಸಾಧ್ಯ ಎಂದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ಕೆ.ಎಲ್.ಮಂಜು, ಮಾರುತಿ, ಕರಿಯಣ್ಣ, ನರಸಿಂಹಮೂರ್ತಿ, ಕೋಕಿಲ್ ಸಂದೀಪ್, ಪುಷ್ಪ,ರಾಗಿಣಿ, ರತ್ನಮ್ಮ, ಲಕ್ಷ್ಮಿದೇವಮ್ಮ, ಕೊರಟಗೆರೆ ಪ.ಪಂ. ಸದಸ್ಯ ಕೆ.ಆರ್ ಓಬಳರಾಜು, ಹಂಚಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಭೀಮರಾಜು, ಯುವ ಘಟಕ ಅಧ್ಯಕ್ಷ ವಿನಯ್‌ಕುಮಾರ್, ಮುಖಂಡರಾದ (ಮೀನು) ಮಂಜಣ್ಣ, ಕಾರ್ ಮಹೇಶ್, ರವಿಕುಮಾರ್, ರಮೇಶ್, ಮಂಜುನಾಥ್, ರಂಗರಾಜು, ಹನುಮಂತರಾಜು ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.