ಸರಗೂರು: ಸಿಗಂದೂರು ಸೇತುವೆಗೆ ಯಾವುದೇ ರಾಜಕೀಯ ವ್ಯಕ್ತಿಗಳ ಹೆಸರು ಇಡುವಬದಲು ಚೌಡೇಶ್ವರಿ ದೇವಿ ಹಾಗೂ ಶರಾವತಿ ನದಿ ಎರಡು ಹೆಸರು ಇಡಬೇಕು ಎಂದು ಸರಗೂರು ತಾಲೂಕು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಯಾವುದೇ ರಾಜಕೀಯ ಪಕ್ಷವನ್ನು ಬೆರಸಬೇಡಿ. ಏಕೆಂದರೆ ಯಾವುದೇ ಸರ್ಕಾರ ಬಂದರೂ ಅವರು ಕೆಲಸ ಮಾಡಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಕಾಮಗಾರಿ ಮಾಡಿಬಹುದು. ಆದರೆ ಅವರ ಹೆಸರಿಡುವಂತೆ ನಿರ್ದೇಶನ ನೀಡಬೇಕು ಎನ್ನುವುದು ಯಾವ ಮಟ್ಟಕ್ಕೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.
ನಮ್ಮ ರಾಜ್ಯದಲ್ಲಿ ಶಿವಮೊಗ್ಗದಲ್ಲಿ ನದಿಗಳು ಇವೆ ಹಾಗೂ ಪ್ರಸಿದ್ಧ ದೇವಾಲಯಗಳು ಇವೆ. ಅವುಗಳ ಹೆಸರುಗಳನ್ನು ಇಟ್ಟರೆ ಶಿವಮೊಗ್ಗ ಜಿಲ್ಲೆಯ ಜನರಿಗೆ ವೈ ಮನಸು ಬರುವುದಿಲ್ಲ ಎಂದು ನಾಗರಾಜು ಸಲಹೆ ನೀಡಿದ್ದಾರೆ.
ಇಲ್ಲಿ ನಾವುಗಳು ಎಲ್ಲಾ ಒಂದೇ ಏಕೆಂದರೆ ಯಾರೇ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ಆದರೂ ರಾಜ್ಯದ ಅಭಿವೃದ್ಧಿಗಳ ಕೆಲಸ ಮಾಡಲೇಬೇಕು. ಆದರೆ ಇವರದ್ದೇ ಹೆಸರು ಇಡಬೇಕು ಎನ್ನುವುದು ತಪ್ಪು. ಇಲ್ಲಿ ವ್ಯಕ್ತಿಗಳು ಅವರ ಬೆಳಕಾಳು ಬೇಯಿಸಿಕೊಳ್ಳಲು ರಾಜಕೀಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕೋರಿ ಜುಲೈ 7ರಂದು ಕೇಂದ್ರ ಭೂಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿಗೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಯಾವುದೇ ರಾಜಕಾರಣಿಗಳ ಹೆಸರನ್ನು ಇಡದಂತೆ ತೀರ್ಪು ಬರುವ ನಿರೀಕ್ಷೆಯಲ್ಲಿರುವುದಾಗಿ ಅವರು ತಿಳಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC