ಸರಗೂರು: ತಾಲೂಕಿನ ಸರಗೂರು ಸಮೀಪದ ಗೊಂತಗಾಲದ ಹುಂಡಿ ಬಳಿಯಲ್ಲಿ ಚಲಿಸುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಗೆ ನುಗ್ಗಿದ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಚಾರ ಗಮನಕ್ಕೆ ಬಂದ ಕೂಡಲೇ ಶಾಸಕ ಅನಿಲ್ ಕುಮಾರ್ ಎಚ್.ಡಿ.ಕೋಟೆಯ ಸಾರ್ವಜನಿಕರ ಆಸ್ಪತ್ರೆಯಲ್ಲಿ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ಬಗ್ಗೆ ವಿಚಾರಿಸಿ ಮಾತನಾಡಿದರು.
ತಾಲೂಕಿನ ಯಾವುದೇ ಸಮಯದಲ್ಲಿ ಈಥರ ಘಟನೆಗಳು ನಡೆಯಬಾರದಾಗಿತ್ತು . ಕೆಎಸ್ಸಾರ್ಟಿಸಿ ವ್ಯವಸ್ಥಾಪಕರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಬಸ್ ನ ಅಪಘಾತ ಸಂಭವಿಸಿರುವ ಗಾಯಾಳಗಳಿಗೆ ಜವಾಬ್ದಾರಿಯನ್ನು ಇಲಾಖೆಯವರು ಉಳಿಸಿಕೊಳ್ಳಬೇಕೆಂದು ಸೂಚನೆ ನೀಡಿದರು.
ಬೊಂತಗಾಲದ ಹುಂಡಿ ಬಳಿಯಲ್ಲಿ ಗುರುವಾರ ಸಂಜೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಯ ನೀರಿಗೆ ನುಗ್ಗಿದ ಘಟನೆ ನಡೆದಿತ್ತು.
ಘಟನೆಯಲ್ಲಿ ಗಾಯಗೊಂಡಿದ್ದ 7 ಮಂದಿ ಗಾಯಾಳುಗಳನ್ನು ಸರಗೂರು ಸ್ವಾಮಿ ವಿವೇಕಾನಂದ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದರು. ಬಾಲಕನೊಬ್ಬ ಸೇರಿದಂತೆ 3 ಮಂದಿಯನ್ನು ಮೈಸೂರು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಎಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ ವಿಚಾರಿಸಿ, ವೈಯಕ್ತಿಕ ಧನಸಹಾಯ ಮಾಡಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC