ಬೀದರ್ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆದೇಶಿಸಿದೆ.
ಭಾಲ್ಕಿ ತಾಲ್ಲೂಕಿನ ಮೇಹಕರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಳವಾಯಿ ಗ್ರಾಮದಲ್ಲಿ 2024 ರಲ್ಲಿ ಪೋಕ್ಸೋ ಪ್ರಕರಣಕ್ಕೆ ಒಳಪಡುವ ಘಟನೆ ನಡೆದಿತ್ತು. ಈ ಘಟನೆ ವಿರುದ್ಧ ಮೇಹಕರ್ ಪೊಲೀಸ್ ಠಾಣೆಯಲ್ಲಿ ಅಂದಿನ ಎಎಸ್ ಐ ಚಂದ್ರಕಾಂತ್ ಅವರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ತನಿಖೆಯನ್ನು ಭಾಲ್ಕಿ ಗ್ರಾಮೀಣ ಪೊಲೀಸ್ ವೃತ ನಿರೀಕ್ಷಕ ಜಿ.ಎಸ್.ಬಿರಾದಾರ್ ಅವರು ವಹಿಸಿಕೊಂಡು ಪ್ರಕರಣದ ತನಿಖೆಯನ್ನು ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು
ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಅಪರಾಧಿಯನ್ನು ಶಿಕ್ಷೆಗೆ ಒಳಪಡಿಸಿ ಆದೇಶಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC