ಬೀದರ್ : ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇ–ಪಾವತಿ ಅಭಿಯಾನ (ವಾರಸುದಾರರ ಹಕ್ಕು ಬದಲಾವಣೆ) ಆಂದೋಲನ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಔರಾದ್ ನ ತಹಶೀಲ್ದಾರ್ ಮಹೇಶ ಪಾಟೀಲ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮರಣ ಹೊಂದಿದ ಪಟ್ಟೆದಾರರ ಹೆಸರು ತೆಗೆದು, ಅವರ ಕಾನೂನು ಬದ್ಧ ವಾರಸುದಾರರ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲ ರೈತರು ಮೃತರ ಮರಣ ಪ್ರಮಾಣ ಪತ್ರ, ಕುಟುಂಬದ ವಂಶವೃಕ್ಷ, ಆಧಾರ್ ಕಾರ್ಡ್ ಹಾಗೂ ಪಹಣಿಯೊಂದಿಗೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಮರಣ ಹೊಂದಿದ ಪಟ್ಟೆದಾರರ ಹೆಸರು ಪಹಣಿಯಲ್ಲಿ ಮುಂದುವರಿದರೆ, ಬ್ಯಾಂಕ್ ಲೋನ್, ಬೆಳೆ ಪರಿಹಾರ, ಬೆಳೆ ವಿಮೆ, ಪಿಎಂ ಕಿಸಾನ್ ಯೋಜನೆ, ಬೀಜ, ಗೊಬ್ಬರ ಹಾಗೂ ಇತರೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ಎಲ್ಲ ರೈತರು ಇ-ಪಾವತಿ ಖಾತೆ ಅಭಿಯಾನದ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


