ಬೀದರ್: ಜಿಲ್ಲೆಯ ಔರಾದ ತಾಲೂಕಿನ ಚಿಕ್ಕಿ (ಯು) ಗ್ರಾಮದ ಕಾಲೇಜು ಓದುತಿದ್ದ ಬಾಲಕಿ ವಂದನಾ ಗಣೇಶ್ ಪಾವಾರ (21) ಅನ್ನುವವಳು ಪಟ್ಟಣದ ಬಿಸಿಎಂ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಶನಿವಾರ ರಾತ್ರಿ ಪಟ್ಟಣದಲ್ಲಿ ಜರುಗಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ರಾತ್ರಿ ಊಟದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೃತ ಬಾಲಕಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ನಲ್ಲಿ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತಿದ್ದಳು ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಔರಾದ್ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಎಲ್ಲ ಮಾಹಿತಿಗಳನ್ನು ಕಲೆಹಾಕಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ .
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC