ಬೆಂಗಳೂರು: ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು, ನೊಂದ ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಗೊಂಡನಹಳ್ಳಿಯಲ್ಲಿ ನಡೆದಿದೆ.
22 ವರ್ಷ ವಯಸ್ಸಿನ ಶ್ರೀಜಾ ರೆಡ್ಡಿ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳ ಆತ್ಮಹತ್ಯೆಯನ್ನು ಕಂಡು ನೊಂದ ತಾಯಿ ರಕ್ಷಿತಾ(48), ತನ್ನ ಪತಿಗೆ ಕರೆ ಮಾಡಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾಳೆ.
ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ, ಮಗಳ ಮೃತದೇಹ ಫ್ಯಾನ್ ನಿಂದ ಇಳಿಸಿ, ಅದೇ ಫ್ಯಾನ್ ಗೆ ತಾನೂ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಆಂಧ್ರಪ್ರದೇಶ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಶ್ರೀಜಾ ರೆಡ್ಡಿ ಖಾಸಗಿ ಕಂಪನಿಯಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ನಿರ್ವಹಿಸ್ತಿದ್ದಳು. ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವೈಟ್ ಫೀಲ್ಡ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC