ತುಮಕೂರು: ಹೃದಯಾಘಾತಕ್ಕೆ 23 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದೇಶ್ (23) ಮೃತ ಯುವಕನಾಗಿದ್ದಾನೆ. ಚಿಕ್ಕನಾಯಕನಹಳ್ಳಿಯಲ್ಲಿ ಸ್ನೇಹಿತನ ಮನೆಗೆ ಹೋಗಿ ಊಟಕ್ಕೆ ಹೋಗಿ ವಾಪಸ್ ಬರುವಾಗ ದಾರಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾನೆ.
ತಕ್ಷಣ ಅವರನ್ನು ಗುಬ್ಬಿ ಆಸ್ಪತ್ರೆಗೆ ಸ್ನೇಹಿತರು ಕರೆತಂದಿದ್ದಾರೆ. ಆದರೆ ಅವರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.
ಹಠಾತ್ ಹೃದಯಾಘಾತದಿಂದ, ಆಸ್ಪತ್ರೆಗೆ ತರುವ ವೇಳೆ ಆತ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC