ಕೋಲಾರ: KSRTC ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಬಾಬಾಜಾನ್ (53) ಮೃತಪಟ್ಟವರಾಗಿದ್ದಾರೆ. ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.
ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಬಾಬಾಜಾನ್ ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದರು.
ಭಾನುವಾರ ಕೂಡ ಕರ್ತವ್ಯ ನಿಭಾಯಿಸಿ ಮನೆಗೆ ತೆರಳಿದ್ದರು. ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಬಾಬಾಜಾನ್ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC