ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ನಾಯಿಯ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿ ಅಮಾನವೀಯತೆಯಿಂದ ವರ್ತಿಸಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಜುಲೈ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯ ಪಕ್ಕದ ಜಾಗದಲ್ಲಿ ನಾಯಿ ಮಲಗಿತ್ತು. ಈ ವೇಳೆ ಅಲ್ಲಿಗೆ ಬಂದ ಕಾರು, ಸ್ವಲ್ಪ ಹೊತ್ತು ಮುಂದೆಯೇ ನಿಂತಿತ್ತು. ನಂತರ ಚಾಲಕ ಏಕಾಏಕಿ ನಾಯಿಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದಾನೆ. ಇದರಿಂದ ನಾಯಿ ಗಂಭೀರವಾಗಿ ಗಾಯಗೊಂಡಿದೆ.
ಉದ್ದೇಶಪೂರ್ವಕವಾಗಿಯೇ ನಾಯಿಯ ಮೇಲೆ ಕಾರು ಹತ್ತಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯವನ್ನು ನಗರ ಪೊಲೀಸರಿಗೆ ಟ್ಯಾಗ್ ಮಾಡಿರುವ ಸಾರ್ವಜನಿಕರು ಕಾರಿನ ಚಾಲಕನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC