ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ.
ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ ಅಂತ್ಯ ಸಂಸ್ಕಾರ ನಡೆದಿದೆ.
ಸರೋಜಾದೇವಿ ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಅವರ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC