ಸರಗೂರು: ಜುಲೈ 18ರಂದು ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ಕೂಡಗಿ ಗೋವಿಂದರಾಜು ತಿಳಿಸಿದ್ದಾರೆ.
ತಾಲ್ಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಸರ್ಕಾರದಿಂದ ದರಖಾಸ್ತು ಮೂಲಕ ಮಜೂರಾತಿ ಮಾಡಿರುವ ವಿತರಣೆ ಮಾಡದೆ ಇರುವ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ದರಖಾಸ್ತು ಭೂಮಿ ಸಕ್ರಮೀಕರಣವು ಆಯಾ ಕ್ಷೇತ್ರದ ಶಾಸಕರುಗಳ ಅಧ್ಯಕ್ಷತೆ ಹೊಂದಿರುವ ಸಮಿತಿಗಳು ನಿರ್ಲಕ್ಷತೆಯಿಂದ ಸರಿಯಾಗಿ ಕೆಲಸ ನಿರ್ವಹಿಸದೆ ಫಾರಂ 53 54 57 ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಮತ್ತು ತಳಸಮುದಾಯಗಳ ಅರ್ಜಿಗಳು ರಾಶಿಗಟ್ಟಲೆ ಕೊಳೆಯುತ್ತಾ ಬಿದ್ದಿವೆ. ಬಾಬಾ ಸಾಹೇಬರ ಸೈದ್ಯಾಂತಿಕಾ ನೆಲೆಯಲ್ಲಿ ದಲಿತ ಚಳುವಳಿಗಳು ಹಿಂದಿನಿಂದಲೂ ಭೂಮಿ ಶಿಕ್ಷಣ ವಸತಿ ಹಾಗೂ ಉದ್ಯೋಗ ಮತ್ತು ಮೂಲಭೂತ ಅವಶ್ಯಕತೆಗಾಗಿ ಆಳುವ ಪ್ರಭುತ್ವದೊಂದಿಗೆ ನಿರಂತರ ಸಂಘರ್ಷ ನಡೆಸುತ್ತಲೇ ಬಂದಿದೆ. ಆದರೆ ಆಳುವ ಸರ್ಕಾರ ತನ್ನ ವಿಫಲತೆಯನ್ನು ತೋರುತ್ತಲೇ ಬಂದಿವೆ. ಆದ್ದರಿಂದ ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ದಲಿತರ ಭೂಮಿ ವಸತಿ ಮತ್ತು ಇತರ ಹಕ್ಕುಗಳಿಗಾಗಿ ಒತ್ತಾಯಿಸಿ ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಮಿತಿ ಪದಾಧಿಕಾರಿಗಳು ಈ ಪ್ರತಿಭಟನಾ ಧರಣಿ ನಡೆಸಲು ಉದ್ದೇಶಿಸಿರುವುದಾಗಿ ಅವರು ತಿಳಿಸಿದರು.
ಪ್ರಗತಿಪರ ಚಿಂತಕರು, ಬುದ್ಧಿಜೀವಿಗಳು ಅನ್ಯಾಯಕ್ಕೆ ಒಳಗಾದ ರೈತರು ಮಹಿಳೆಯರು ವಿದ್ಯಾರ್ಥಿಗಳು ಭಾಗವಹಿಸುವಂತೆ ಗೋವಿಂದರಾಜು ಮನವಿ ಮಾಡಿಕೊಂಡರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


