ರಾಮನಗರ: ಡಿಜಿಟಲ್ ಅರೆಸ್ಟ್ ಬೆದರಿಕೆಯಿಂದ ನೊಂದು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ.
ಬೆಸ್ಕಾಂ ಸಿಬ್ಬಂದಿ 42 ವರ್ಷದ ಕುಮಾರ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ತಮ್ಮ ಡೆತ್ ನೋಟ್ ನಲ್ಲಿ ಡಿಜಿಟಲ್ ಅರೆಸ್ಟ್ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್‌ನಲ್ಲಿ ಬೆಸ್ಕಾಂ ಹೊರಗುತ್ತಿಗೆ ನೌಕರರನಾಗಿ ಕುಮಾರ್ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕಾಲ್ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿದ್ದ.
ಕೇಸ್ ನಿಂದ ಕೈಬಿಡಲು ಅಕೌಂಟ್ ಗೆ ಹಣ ಹಾಕು ಎಂದು ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಅಕೌಂಟ್ ಗೆ ಹಾಕಿಸಿಕೊಂಡಿದ್ದ. ಆದರೆ ಮತ್ತೆ ಹಣ ನೀಡುವಂತೆ ಬೆದರಿಸಿದ್ದ. ಕಿರುಕುಳಕ್ಕೆ ಬೇಸತ್ತ ಕುಮಾರ್ ಡೆತ್‌ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC