ಸರಗೂರು: ಜಿ.ಪಂ. ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಶಾಸಕ ಅನಿಲ್ ಕುಮಾರ್ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ತಾಲೂಕು ಯೂಥ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಸಹಳ್ಳಿ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಎರಡು ವರ್ಷ ಪೂರೈಸಿದೆ. ಶಾಸಕ ಅನಿಲ್ ಅವರು ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕು ಬಾರಿ ತಾಲೂಕಿಗೆ ಸಿಎಂ ಸಿದ್ದರಾಮಯ್ಯನವರನ್ನು ಕರೆಸಿ, ಬಹುಕೋಟಿ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿಸಿದ್ದಾರೆ. ಶಾಸಕರು ದಿ. ಸಂಸದ ಆರ್. ಧ್ರುವನಾರಾಯಣ್ ರವರ ಮಾರ್ಗದರ್ಶನದಲ್ಲಿ ಮುಂದೆ ಸಾಗುತ್ತಿದ್ದಾರೆ. ಆದರೆ ಸುಳ್ಳು ಮಾಹಿತಿಗಳನ್ನು ಹರಡಿ ಅವರ ಹೆಸರನ್ನು ಕೆಡಿಸಲು ವಿರೋಧಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ನವೀನ್ ಆರೋಪಿಸಿದರು.
ಮುಂದಿನ ಜಿ.ಪಂ. ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಎದುರಿಸಲು ಸಾಧ್ಯವಿಲ್ಲದೇ ವಿಪಕ್ಷಗಳು ಈ ಅಪಪ್ರಚಾರ ಮಾಡುತ್ತಿದ್ದಾರೆ. ಆರೋಪ ಮಾಡುವವರು ನಮ್ಮ ಜೊತೆಗೆ ಬರಲಿ, ಶಾಸಕರು ತಾಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನ ತೋರಿಸುತ್ತೇವೆ ಎಂದು ಅವರು ಸವಾಲು ಹಾಕಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC