ಗಾಂಧೀನಗರ: ಮೀನು ನೋಡಲು 7 ವರ್ಷದ ಮಗಳನ್ನು ಕರೆದುಕೊಂಡು ಹೋದ ತಂದೆ ಮಗಳನ್ನು ಕಾಲುವೆಗೆ ತಳ್ಳಿ ಹಾಕಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಭೂಮಿಕಾ ಮೃತ ಬಾಲಕಿಯಾಗಿದ್ದು, ಖೇಡಾ ನಿವಾಸಿ ವಿಜಯ್ ಸೋಲಂಕಿ ತನ್ನ ಮಗಳನ್ನು ಹತ್ಯೆ ಮಾಡಿದ ತಂದೆಯಾಗಿದ್ದಾನೆ. ಘಟನೆ ಸಂಬಂಧ ಪತಿ ವಿರುದ್ಧ ಅಂಜನಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನನ್ನ ಮಗಳು ಆಕಸ್ಮಿಕವಾಗಿ ಸಾವನ್ನಪ್ಪಿಲ್ಲ. ಪತಿ ಗುಜರಾತ್ ನ ನರ್ಮದಾ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ್ದಾನೆ ಎಂದು ದೂರು ನೀಡಿದ್ದಾರೆ.
ಸೋಲಂಕಿ ದಂಪತಿ ತಮ್ಮ ಮಗಳ ಜೊತೆ ಸ್ಥಳೀಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮೂವರು ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ತವರು ಮನೆಗೆ ಹೋಗುವ ಬಯಕೆಯನ್ನು ಅಂಜನಾ ವ್ಯಕ್ತಪಡಿಸಿದರು. ಅದಕ್ಕೆ ಪತಿ ನಿರಾಕರಿಸಿದ. ‘ನನಗೆ ಗಂಡು ಮಗು ಬೇಕಿತ್ತು. ಆದರೆ, ನೀನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದೀಯಾ’ ಎಂದು ಪತ್ನಿಯನ್ನು ನಿಂದಿಸಿದ್ದ.
ಕೆಲವು ನಿಮಿಷಗಳ ನಂತರ, ರಾತ್ರಿ 8 ಗಂಟೆ ಸುಮಾರಿಗೆ, ಆ ವ್ಯಕ್ತಿ ಕಪದ್ವಾಂಜ್ ನ ವಾಘಾವತ್ ಸೇತುವೆಯ ಮೇಲೆ ಬೈಕ್ ನಿಲ್ಲಿಸಿ ತನ್ನ ಮಗಳನ್ನು ವೇಗವಾಗಿ ಹರಿಯುವ ನರ್ಮದಾ ಕಾಲುವೆಗೆ ತಳ್ಳಿದ್ದಾನೆ. ಈ ಘಟನೆಯನ್ನು ಯಾರಿಗಾದರೂ ತಿಳಿಸಿದರೆ ವಿಚ್ಛೇದನ ನೀಡುವುದಾಗಿ ಪತ್ನಿಗೆ ಹೆದರಿಸಿದ್ದ. ಇದರಿಂದ ಅಂಜನಾ ತುಂಬಾ ದುಃಖಿತಳಾಗಿದ್ದಳು. ಕೊನೆಗೆ ಆಕೆಯನ್ನು ತವರು ಮನೆಗೆ ಬಿಟ್ಟು ಬಂದಿದ್ದ. ಮಗಳನ್ನು ಕಳೆದುಕೊಂಡ ನೋವನ್ನು ತಾಳಲಾರದೇ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC