ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ಶಾಲಾ ಬಸ್ ಚಾಲನೆ ಮಾಡುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ ಚಾಲಕ ಮೃತಪಟ್ಟ ನಡೆದಿದೆ.
ಪಕ್ಕಿರೇಶ ಮಲ್ಲೇಶಣ್ಣನವರ್ (25) ಖಾಸಗಿ ಶಾಲೆಯ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಇವರು ಸಂಜೆ ಶಾಲೆಯಿಂದ ಮಕ್ಕಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ರಸ್ತೆ ಬದಿಯಲ್ಲಿ ಅವರು ಬಸ್ ನಿಲ್ಲಿಸಿದ್ದಾರೆ.
ಈ ವೇಳೆ ಮಕ್ಕಳು ಚೀರಾಡಿ ಸ್ಥಳೀಯರನ್ನು ಸಹಾಯಕ್ಕಾಗಿ ಕರೆದಿದ್ದಾರೆ, ತಕ್ಷಣ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC