nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ
    ಜಿಲ್ಲಾ ಸುದ್ದಿ July 17, 2025

    ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ

    By adminJuly 17, 2025No Comments1 Min Read
    aourad

    Provided by
    Provided by

    ಬೀದರ್ : ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯ ಹಿನ್ನೆಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿ ವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ಅಧಿಕಾರಿಗೆ ನಿರ್ದೇಶನ ನೀಡಿದರು.

    ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ಮತ್ತು ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಪಾಟೀಲ್ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ ಅಗತ್ಯ ಸಲಹೆಗಳು ನೀಡಿದ್ದಾರೆ.

    ಜಿಲ್ಲೆಯ ಸಿಎಚ್‌ ಸಿ ಮತ್ತು ಪಿಎಚ್‌ ಸಿ ಕೇಂದ್ರಗಳಲ್ಲಿನ ವೈದ್ಯಾಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ತಮ್ಮ ವ್ಯಾಪ್ತಿಯ ವಸತಿ ನಿಲಯಗಳಿಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಅವರ ಚಲನವಲನಗಳಲ್ಲಿ ವ್ಯತ್ಯಾಸ, ಖಿನ್ನತೆಯಂತಹ ವಿಷಯಗಳು ಕಂಡುಬಂದಲ್ಲಿ ವೈದ್ಯರು ಹಾಗೂ ನಿಲಯ ಪಾಲಕರು ತಮ್ಮ ಇಲಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಬೇಕು. ಈ ಮೂಲಕ ಮಕ್ಕಳ ಆರೋಗ್ಯದ ಸ್ಥಿರತೆ ಕಾಪಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ಅವರಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಮತ್ತು ನಿಲಯ ಪಾಲಕರ ಮಾಹಿತಿಯನ್ನು ಅಧಿಕಾರಿಗಳು ಒಂದೆರಡು ದಿನದಲ್ಲಿ ನೀಡಬೇಕು. ಹಾಸ್ಟೆಲ್‌ ಗಳಿಗೆ ಆಯಾ ವ್ಯಾಪ್ತಿಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು.


    Provided by
    Provided by

    ಈ ಸಂದರ್ಭದಲ್ಲಿ ಮನೋವೈದ್ಯರಾದ ಡಾ.ಅಮಲ್ ಮತ್ತು ಡಾ.ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

     ವರದಿ: ಅರವಿಂದ ಮಲ್ಲಿಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.