ತಿಪಟೂರು: ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಮಾಡಿರುವುದು ಸಾರ್ವಜನಿಕರ ಅನುಕೂಲಕ್ಕಾಗಿ, ಬಸ್ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು, ಪ್ರಯಾಣಿಕರಿಂದ ಯಾವುದೇ ದೂರು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಎಂ.ಎನ್.ಕಾಂತರಾಜು ತಿಳಿಸಿದರು.
ಶಕ್ತಿ ಯೋಜನೆಯಿಂದ ಮಹಿಳೆಯರು 500 ಕೋಟಿ ಉಚಿತ ಪ್ರಯಾಣ ನಡೆಸಿದ್ದಾರೆ, ಸಿಬ್ಬಂದಿಯಿಂದ ಪ್ರಯಾಣ ಮಾಡುವಾಗ ಕಿರಿಕಿರಿಯಾಗುತ್ತಿರುವ ದೂರುಗಳು ಬಂದಿದೆ. ಇಂಥ ವರ್ತನೆ ನಿಲ್ಲಬೇಕು. ದೂರು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಕಾಂತರಾಜು ತಿಳಿಸಿದರು.
ಇದುವರೆಗೂ ತಾಲೂಕು ಒಟ್ಟು 1.60 ಕೋಟಿ ಜನರು ಶಕ್ತಿ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ಈ ವರ್ಷ ಜನವರಿಯಿಂದ ಜೂನ್ ಅಂತ್ಯದವರೆಗೆ 43 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಟಿ.ಎನ್. ಪ್ರಕಾಶ್ ಅಧಿಕಾರಿಗಳಾದ ರೂಪಶ್ರೀ ಬಸ್ ನಿಲ್ದಾಣದ ನಿರ್ವಹಣಾಧಿಕಾರಿ ಪ್ರಸನ್ನ, ಹರೀಶ್ ಮುಂತಾದವರು ಇದ್ದರು ಹಾಗೂ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ ಹಾಜರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC