ತಿಪಟೂರು: ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಸಮಿತಿ ವತಿಯಿಂದ ತಿಪಟೂರು ನಗರದ ಕಲ್ಪತರು ಇಂಜಿನಿಯರಿಂಗ್ ಕಾಲೇಜು ಆಡಿಟೋರಿಯಂನಲ್ಲಿ ಜಿಲ್ಲಾ ಸಮಾವೇಶವನ್ನು ಜುಲೈ 20ರ ಬೆಳಗ್ಗೆ 10 ಗಂಟೆಗೆ ಆಯೋಜನೆ ಮಾಡಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಎಲ್. ಆರ್. ಚಂದ್ರಶೇಖರ್ ತಿಳಿಸಿದರು
ನಮ್ಮ ಸಮಾಜ ಸುಮಾರು 100 ವರ್ಷಗಳ ಇತಿಹಾಸ ಹೊಂದಿದ್ದು, ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಆರ್ಯವೈಶ್ಯ ಸಮಾಜದ ಅಭಿವೃದ್ಧಿ ಸಂಘಟನೆಗಾಗಿ ಹತ್ತಾರು ಯೋಜನೆಗಳನ್ನು ತಂದು ಬಡವರು, ಅಶಕ್ತರು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಇದರಲ್ಲಿ ವೃದ್ಧಾಪ್ಯ ವೇತನ ಸಂಧ್ಯಾ ಶ್ರೀ ಯೋಜನೆ ಅಂಗವಿಕಲರಿಗೆ ಮಾಸಾಸನ ಅಸಹಾಯಕ ವಿದ್ಯಾರ್ಥಿಗಳಿಗೆ ಅಮೃತ ಯೋಜನೆಯನ್ನು ಉದ್ಯೋಗ ಮಿತ್ರ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಯೋಜನೆ ಮಾಡಿಕೊಂಡು ಬಂದಿದ್ದೇವೆ. ಈ ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಸಾವಿರ ಜನ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ತಿಪಟೂರು ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಾಗೇಪಲ್ಲಿ ನಟರಾಜ ಮಾತನಾಡಿ, ನಮ್ಮ ಸಮಾಜದ ಜಿಲ್ಲಾ ಸಮಾವೇಶವನ್ನು ತಿಪಟೂರಿನಲ್ಲಿ ಆಚರಣೆ ಮಾಡಲಾಗುತ್ತಿದ್ದು, ಸಮಾಜಕ್ಕೆ ಶಕ್ತಿ ತುಂಬುಲು ಸಂಘಟನೆಗಾಗಿ ಸಮಾವೇಶ ನಡೆಯುತ್ತಿದೆ. ಜಿಲ್ಲೆಯ ಹತ್ತು ತಾಲೂಕುಗಳಿಂದ ಒಂದೂವರೆ ಸಾವಿರ ಜನ ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ.ಷಡಕ್ಷರಿ ಅವರು ನೆರವೇರಿಸಲಿದ್ದು, ಆರ್ಯವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ರವಿಶಂಕರ್, ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆಯ ಸಚಿವ ವಿ.ಸೋಮಣ್ಣ ಸಮಾಜದ ಗಣ್ಯರು ಸಮಾಜದ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಆರ್ಯ ವೈಶ್ಯ ಮಂಡಳಿಯ ಗೌರವಾಧ್ಯಕ್ಷ ಜಿ.ಎನ್.ವಿಶ್ವನಾಥ್, ಉಪಾಧ್ಯಕ್ಷ ಕೆ.ಪಿ. ಪ್ರವೀಣ್, ಕಾರ್ಯದರ್ಶಿ ವಿಶ್ವನಾಥ್ ಬಾಬು, ಟಿ.ಆರ್. ಪ್ರಕಾಶ್ ಮತ್ತು ಮಹಿಳಾ ಸಂಘಟಕರಾದ ಸುನಯ ಶ್ರೀನಾಥ್, ಸೌಜನ್ಯ ಪ್ರದೀಪ್ ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC