nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದಲ್ಲಿ ಸಾಮಾಜಿಕ ವ್ಯವಸ್ಥೆ ಹದೆಗೆಟ್ಟಿದೆ: ಕಾನೂನು ಅರಿವು ಕಾರ್ಯಕ್ರಮದಲ್ಲಿ ಆರ್.ಕಿರಣ್
    ಜಿಲ್ಲಾ ಸುದ್ದಿ July 18, 2025

    ದೇಶದಲ್ಲಿ ಸಾಮಾಜಿಕ ವ್ಯವಸ್ಥೆ ಹದೆಗೆಟ್ಟಿದೆ: ಕಾನೂನು ಅರಿವು ಕಾರ್ಯಕ್ರಮದಲ್ಲಿ ಆರ್.ಕಿರಣ್

    By adminJuly 18, 2025No Comments2 Mins Read
    kanunu arivu

    Provided by
    Provided by

    ಸರಗೂರು: ದೇಶದಲ್ಲಿ ಸಾಮಾಜಿಕ ವ್ಯವಸ್ಥೆ ಹದೆಗೆಟ್ಟಿದೆ. ವಿದೇಶಗಳಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಶಾಲೆಯಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ, ಭದ್ರತಾ ಸಿಬ್ಬಂದಿ ಇರುವ ಕುರಿತು ವಿಚಾರಿಸಿ ಬಳಿಕ ಮಕ್ಕಳನ್ನು ಶಾಲೆ ದಾಖಲಿಸುತ್ತಾರೆ. ಇದು ವಿದೇಶಿಗರು ಮಕ್ಕಳ ರಕ್ಷಣೆ ಬಗ್ಗೆ ಹೊಂದಿರುವ ವಿಶೇಷ ಒಲವು ತೋರಿಸುತ್ತದೆ. ಆದರೆ ನಮ್ಮಲ್ಲಿ ಅಂತಹ ಕಾಳಜಿ ಇಲ್ಲ’ ಎಂದು  ಸರಗೂರು ಪೊಲೀಸ್ ಠಾಣೆಯ ಸಬ್ ಇನ್‌ ಸ್ಪೆಕ್ಟರ್‌ ಆರ್.ಕಿರಣ್ ಹೇಳಿದರು.

    ಪಟ್ಟಣದ ಪೋಲಿಸ್ ಠಾಣೆಯ ಆವರಣದಲ್ಲಿ ಗುರುವಾರದಂದು ವಿವೇಕಾನಂದ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೋಲೀಸ್ ಇಲಾಖೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಶೌಚಾಲಯ, ತರಗತಿಗಳು ನಡೆಯದ ಕೊಠಡಿಗಳು, ಆಟದ ಮೈದಾನದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆಯುವ ಸಂಭವ ಹೆಚ್ಚು ಇರುತ್ತದೆ. ಹೀಗಾಗಿ ಶಿಕ್ಷಕರು ಅಂತಹ ಸ್ಥಳಗಳಿಗೆ ಆಗಾಗ ಭೇಟಿ ನೀಡಿ ಗಮನಿಸುತ್ತಿರಬೇಕು. ಒಂದೊಮ್ಮೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಂಭವಿಸಿದರೆ ತಕ್ಷಣವೇ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

    ಶಾಲೆಗಳಲ್ಲಿ ಶಿಕ್ಷಕರು ಪ್ರತಿಕ್ಷಣ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಬೇಕು. ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ಮತ್ತು ದೈಹಿಕ ಕಿರುಕುಳವನ್ನು ತಡೆಗಟ್ಟಬೇಕು. ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು.


    Provided by
    Provided by

    ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಶಿಕ್ಷಕರು, ಪೋಷಕರು ಮತ್ತು ಪೊಲೀಸರು ಗೌಪ್ಯವಾಗಿಡಬೇಕು. ಮಾಧ್ಯಮಗಳಲ್ಲಿ ಆ ಕುರಿತು ವರದಿಗೆ ಅವಕಾಶ ನೀಡಬಾರದು. ಎಲ್ಲಿಯೂ ಸಹ ಮಗುವಿನ ಹೆಸರು ಬಹಿರಂಗವಾಗದಂತೆ ನೋಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ದೌರ್ಜನ್ಯಕ್ಕೆ ಒಳಗಾದ ಮಗು ಮತ್ತು ಪೋಷಕರ ಕುಟುಂಬಕ್ಕೆ ಆಗುವ ಆಘಾತವನ್ನು ಕಡಿಮೆ ಮಾಡಬಹುದು’ ಎಂದು ಹೇಳಿದರು.

    ಸರ್ಕಲ್ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪ್ರತಿ ಶಾಲೆಯಲ್ಲಿ ಕೂಡ ಕಡ್ಡಾಯವಾಗಿ ಸಿ.ಸಿ.ಕ್ಯಾಮೆರಾ ಅಳವಡಿಸಬೇಕು. ಆದರೆ ಇವತ್ತು ಲಕ್ಷಗಟ್ಟಲೇ ಶುಲ್ಕ ತೆಗೆದುಕೊಳ್ಳುವ ಶಾಲೆಗಳು ಸಹ ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇಡೀ ತಾಲ್ಲೂಕಿನಲ್ಲಿ ಒಂದೇ ಒಂದು ಶಾಲೆಯಲ್ಲೂ  ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಿಲ್ಲ. ಇದು ಶಾಲೆಗಳ ಕಾರ್ಯಲೋಪ ಎತ್ತಿ ತೋರಿಸುತ್ತದೆ’ ಎಂದು ತಿಳಿಸಿದರು.

    ‘ಒಂದು ಸಿ.ಸಿ. ಟಿ.ವಿ ಕ್ಯಾಮೆರಾ ಒಬ್ಬ ಕಾನ್‌ ಸ್ಟೆಬಲ್‌ ಮಾಡುವ ಕೆಲಸ ಮಾಡುತ್ತದೆ. ಆದ್ದರಿಂದ ಪ್ರತಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಬೇಕು. ನಮ್ಮ ಇಲಾಖೆ ವತಿಯಿಂದ ಸಹ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಲೈಂಗಿಕ ಕಿರುಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

    ಮಹಿಳೆ ಮತ್ತು ಮಕ್ಕಳ ಮೇಲೆ ಮನೆಯ ವಾತಾವರಣದಲ್ಲಿಯೇ ಹೆಚ್ಚಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆಯುತ್ತಿವೆ. ಸರ್ಕಾರ ಸಹ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದರೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ’ ಎಂದರು.

    ಈ ಸಂದರ್ಭದಲ್ಲಿ ಕ್ರೈಂ ಬ್ರಾಂಚ್ ಇನ್‌ ಸ್ಪೆಕ್ಟರ್ ಗೋಪಾಲ್, ಎಎಸ್ ಐ ನಾರಾಯಣ್, ಕೃಷ್ಣಕುಮಾರ್ , ಶೋಭಾ, ಪುರುಷೋತ್ತಮ್, ಇಮ್ರಾನ್, ದೇವರಾಜು, ಶಿವರಾಜು, ನಾಗೇಗೌಡ, ಸುನೀಲ್, ಕೃಷ್ಣಯ್ಯ, ಜಗದೀಶ್, ಸುನೀಲ್, ಮಹಾದೇವಮ್ಮ, ಇನ್ನೂ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.