ಮೈಸೂರು: ಧರ್ಮಸ್ಥಳದಲ್ಲಿ ಸರಣಿ ಅತ್ಯಾಚಾರ, ಹತ್ಯೆ ಪ್ರಕರಣಗಳ ಬಗ್ಗೆ ಸಾಕ್ಷಿ ಹೇಳಲು ಮುಂದೆ ಬಂದಿರುವ ಅನಾಮಿಕ ವ್ಯಕ್ತಿಯೊಬ್ಬರ ಪ್ರಕರಣವನ್ನು ಎಸ್ ಐಟಿಗೆ ವಹಿಸಬೇಕು ಎನ್ನುವ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.
ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ, ಎಸ್ ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ. ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC