ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 30ಕ್ಕೆ ಕಾಯ್ದಿರಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಇಂದು ಆದೇಶ ಕಾಯ್ದಿರಿಸಿದ್ದಾರೆ.
ಪ್ರಾಸಿಕ್ಯೂಷನ್ ಪರ ಎಸ್ಎಸ್ ಪಿ ಬಿ.ಎನ್.ಜಗದೀಶ್ ಹಾಗೂ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಜುಲೈ 30ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ.
ಜುಲೈ 30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC